ಮಳವಳ್ಳಿ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

KannadaprabhaNewsNetwork |  
Published : Jun 19, 2026, 01:45 AM IST
18ಕೆಎಂಎನ್ ಡಿ16 | Kannada Prabha

ಸಾರಾಂಶ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ನಿರ್ವಹಣೆಯನ್ನು ಟಾಟಾ ಪವರ್ ಸಂಸ್ಥೆಗೆ ಹಸ್ತಾಂತರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘಗಳ ಒಕ್ಕೂಟ ಮತ್ತು ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯರಿಂದ ಮಳವಳ್ಳಿ ಪಟ್ಟಣದ ಸೆಸ್ಕ್ ಕಚೇರಿ ಮುಂದೆ ಪ್ರತಿಭಟನೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ನಿರ್ವಹಣೆಯನ್ನು ಟಾಟಾ ಪವರ್ ಸಂಸ್ಥೆಗೆ ಹಸ್ತಾಂತರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘಗಳ ಒಕ್ಕೂಟ ಮತ್ತು ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯರು ಪಟ್ಟಣದ ಸೆಸ್ಕ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಕಾರ್ಯಪಾಲಕ ಅಭಿಯಂತರ ಟಿ. ಪುಟ್ಟಸ್ವಾಮಿ ಮಾತನಾಡಿ, ಸೆಸ್ಕ್ಂನಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ನೌಕರರು ಉದ್ಯೋಗ ಭದ್ರತೆ, ವೇತನ, ನಿವೃತ್ತಿ ಸೌಲಭ್ಯಗಳು ಹಾಗೂ ಸೇವಾ ನಿಯಮಗಳ ಬಗ್ಗೆ ಆತಂಕ ಹೊಂದಿದ್ದಾರೆ. ಖಾಸಗಿ ಸಂಸ್ಥೆಗಳು ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಹೆಚ್ಚಿನ ಸಂಖ್ಯೆ ಸಿಬ್ಬಂದಿಯನ್ನು ಕಡಿತಗೊಳಿಸಿದರೇ ಹಲವು ವರ್ಷಗಳಿಂದ ದುಡಿದಿರುವ ಅಧಿಕಾರಿಗಳು ಮತ್ತು ನೌಕರರು ಮುಂದಿನ ಜೀವನಕ್ಕಾಗಿ ಏನು ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಒಂದಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಸರ್ಕಾರಿ ಸಂಸ್ಥೆಯಾಗಿದೆ. ಸೆಸ್ಕ್ ಸಾಮಾಜಿಕ ಜವಾಬ್ದಾರಿಯಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ. ಖಾಸಗೀಕರಣಕ್ಕೆ ನೀಡಿದರೇ ವಿದ್ಯುತ್ ದರ ಏರಿಕೆ ಮಾಡಲಾಗುತ್ತಿದೆ. ಕೂಡಲೇ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸದೆ ಟಾಟಾ ಪವರ್ ಅರ್ಜಿಯನ್ನು ತಿರಸ್ಕರಿಸಿ ಸಾರ್ವಜನಿಕ ವಿದ್ಯುತ್ ಸೇವೆಯನ್ನು ಉಳಿಸಿ ಜನರ ಹಕ್ಕುಗಳನ್ನು ರಕ್ಷಿಸಬೇಕೆಂದು ಆಗ್ರಹಿಸಿದರು.

ಎಇಇ ಪ್ರೇಮ್‌ಕುಮಾರ್ ಮಾತನಾಡಿ, ಸೆಸ್ಕ್ ಕಂಪನಿಯೂ ಹಲವು ವರ್ಷಗಳಿಂದ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿಕೊಂಡು ಬರಲಾಗುತ್ತಿದೆ. ಪೂರೈಕೆ ಹಿಂದೆ ಸಿಬ್ಬಂದಿ ಪರಿಶ್ರಮ ಸಾಕಷ್ಟಿದೆ. ಸರ್ಕಾರಿ ಸಂಸ್ಥೆಗಳು ಖಾಸಗೀಕರಣಗೊಂಡಾಗ ಸೇವೆಗಳ ದರ ಹೆಚ್ಚಳ, ಉದ್ಯೋಗ ಕಡಿತ ಉಂಟಾಗುತ್ತಿರುವುದು ಕಾಣಬಹುದು. ಕೂಡಲೇ ನಿರ್ಧಾರವನ್ನು ವಾಸಪ್ ಪಡೆಯಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸೆಸ್ಕ್ ಎಇಇಗಳಾದ ಸಿತ್ತೇಶ್, ಶಶಿಕಿರಣ್, ಸಿಇಸಿ ಗಿರಿದಾಸ್, ಶ್ರೀನಿವಾಸ್, ರಾಮಚಂದ್ರ, ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಬಿ.ಎಸ್ ದಿವಾಕರ್, ಸೇರಿದಂತೆ ಕೆಇಬಿ ಯೂನಿಯತ್ ಪದಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿ ಇಲಾಖೆಯಿಂದ ರೈತರಿಗೆ ಉತ್ತಮ ಬಿತ್ತನೆ ಬೀಜ, ರಸಗೊಬ್ಬರ ನೀಡಿ
1ಕ್ಕೆ ಹರಿ ಪದಗ್ರಹಣ: ಕಾರ್ಯಕರ್ತರ ಭಾಗಿಗೆ ಕರೆ