ಕನ್ನಡಪ್ರಭ ವಾರ್ತೆ ಮಳವಳ್ಳಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರದ 4ನೇ ದಿನವೂ ಮುಂದುವರೆದಿದೆ. ಇಂದು ವಿವಿಧ ಸಂಘಟನೆಗಳ ಮುಖಂಡರು ಬೆಂಬಲ ನೀಡಿ ಪಾಲ್ಗೊಂಡರು.ಪಟ್ಟಣದ ತಾಪಂ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಮುಷ್ಕರ ಆರಂಭಿಸಿರುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆಯ, ದಲಿತ ಸಂಘಟನೆ ಪದಾಧಿಕಾರಿಗಳು ಸಾಥ್ ನೀಡಿದರು.
ಕರವೇ ತಾಲೂಕು ಘಟಕದ ಅಧ್ಯಕ್ಷ ಎಚ್.ಇ.ಅಪ್ಪೇಗೌಡ ಮಾತನಾಡಿ, ಸರ್ಕಾರ ಜವಾಬ್ದಾರಿ ನಿರ್ವಹಿಸುವ ಗ್ರಾಮ ಆಡಳಿತ ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಲು ಆಗ್ರಹಿಸಿದರು.ಜಿಲ್ಲಾ ಪರಿಷತ್ ಮಾಜಿ ಸದಸ್ಯೆ ಎಂ.ಎನ್.ಜಯರಾಜು ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳಿಗೆ ಸವಲತ್ತು ಕಲ್ಪಿಸಲು ಮುಂದಾಗಲಿ ಎಂದು ಒತ್ತಾಯಿಸಿದರು.
ಮುಖಂಡರಾದ ಕರವೇಯ ಗಂಗರಾಜು, ಶೇಖರ್, ಮಲ್ಲಿಕಾರ್ಜುನ್, ಪ್ರಕಾಶ್, ವೇಣುಗೋಪಾಲ್, ದಲಿತ ಸಂಘಟನೆಗಳ ಯತೀಶ್, ಪ್ರಸಾದ್, ಸುರೇಶ್, ಕುಮಾರ್, ಮರಿಸ್ವಾಮಿ ಬೆಂಬಲ ನೀಡಿದರು. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಘಟಕದ ಅಧ್ಯಕ್ಷ ಮಧು, ಉಪಾಧ್ಯಕ್ಷೆ ರಂಜಿತಾ, ಕಾರ್ಯದರ್ಶಿ ಪ್ರವೀಣ್, ಖಜಾಂಚಿ ನಿರಂಜನ್, ನಂದೀಶ್ ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು.ಅನಿರ್ದಿಷ್ಟಾವಧಿ ಪ್ರತಿಭಟನೆ 4ನೇ ದಿನವೂ ಮುಂದುವರಿಕೆ
ಪಾಂಡವಪುರ: ವಿವಿಧ ಬೇಡಿಕೆ ಈಡೇರಿಸುವಂತೆ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ನಾಲ್ಕನೇ ದಿನ ಗುರುವಾರವೂ ನಡೆಯಿತು.ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗ ಟೆಂಟ್ ಹಾಕಿಕೊಂಡು ಕರ್ತವ್ಯಕ್ಕೆ ಹಾಜರಾಗದೆ ಕೈಗೆ ಕಪ್ಪುಪಟ್ಟಿ ಪ್ರತಿಭಟನೆ ನಡೆಸಿದರು. ಸಂಘದ ಪ್ರಧಾನ ಕಾರ್‍ಯದರ್ಶಿ ಸಂಜೀವ್‌ರಾಥೋಡ್ ಮಾತನಾಡಿ, ರಾಜ್ಯ ಸರ್ಕಾರ ಗ್ರಾಮದ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸುವಂತೆ ಭರವಸೆ ನೀಡಿ ನಾಲ್ಕು ತಿಂಗಳಾಗಿದೆ. ಈವರೆಗೂ ಬೇಡಿಕೆ ಈಡೇರಿಸದೆ ನಿರ್ಲಕ್ಷ್ಯ ವಹಿಸಿದೆ. ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಸಿದರು.
ಧರಣಿಯಲ್ಲಿ ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ರವಿಬಡಿಗೇರ್, ಉಪಾಧ್ಯಕ್ಷೆ ಜ್ಯೋತಿ, ಜಿಲ್ಲಾ ಪ್ರತಿನಿಧಿ ದಿನೇಶ್ ಸೇರಿದಂತೆ ಹಲವರು ಭಾಗವಹಿಸಿದದ್ದರು.