ಹೊನ್ನಹಳ್ಳಿಯಲ್ಲಿ 6 ವರ್ಷದ ಗಂಡು ಚಿರತೆ ಬೋನಿಗೆ: ಜನರು ನಿರಾಳ

KannadaprabhaNewsNetwork |  
Published : Jun 05, 2026, 01:45 AM IST
ಹೊನ್ನಹಳ್ಳಿ ಬಳಿ  ಚಿರತೆ ಸೆರೆ- ಸುರಕ್ಷಿತವಾಗಿ ದಟ್ಟಾರಣ್ಯಕ್ಕೆ  | Kannada Prabha

ಸಾರಾಂಶ

ಜಾನುವಾರುಗಳ ಮೇಲೆ ದಾಳಿ ಮಾಡಿ ರೈತರಿಗೆ ಆತಂಕ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾದ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಬಳಿ ನಡೆದಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರಜಾನುವಾರುಗಳ ಮೇಲೆ ದಾಳಿ ಮಾಡಿ ರೈತರಿಗೆ ಆತಂಕ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾದ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಬಳಿ ನಡೆದಿದೆ.ಸೆರೆಸಿಕ್ಕ ಚಿರತೆಯು 6 ವರ್ಷ ಪ್ರಾಯದ ಗಂಡು ಚಿರತೆಯಾಗಿದ್ದು, ಕಳೆದ ಹಲವು ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದರಿಂದ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್‌ ವಲಯ ಅರಣ್ಯ ಸಿಬ್ಬಂದಿ ಆಯಕಟ್ಟಿನ ಸ್ಥಳಗಳಲ್ಲಿ ಕೊಟ್ಟಿಗೆ ಮಾದರಿ ಬೋನಿಟ್ಟಿದ್ದರು.ಆಹಾರ ಅರಸಿ ಬಂದ ಚಿರತೆ ಬೋನಿಗೆ ಸೆರೆಯಾಗಿದ್ದು, ಸೆರೆಸಿಕ್ಕ ಚಿರತೆಯನ್ನು ದಟ್ಟಾರಣ್ಯಕ್ಕೆ ಬಿಡಲಾಗುವುದು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಥಿ ತಂದು ಕೊಟ್ಟಿದ್ದ ಮಾವಿನ ಹಣ್ಣು ಸೇವಿಸಿ ಇಬ್ಬರು ಬಾಲಕಿಯರು ಸಾವು!
ಮೆಡಿಕಲ್‌ ಸೀಟು ಶುಲ್ಕ ಈ ವರ್ಷ ಹೆಚ್ಚಿಸದಿರಲು ಸರ್ಕಾರ ನಿರ್ಧಾರ