ಮೋದಿ ಕಾರ್ಯಕ್ರಮಕ್ಕೆ ಮಲೆನಾಡು ರೈತ ಹೋರಾಟ ಸಮಿತಿ ಬಹಿಷ್ಕಾರ

KannadaprabhaNewsNetwork |  
Published : Mar 17, 2024, 01:50 AM IST
(-ಫೋಟೋ: ಸಾಂದರ್ಭಿಕ ಚಿತ್ರ)  | Kannada Prabha

ಸಾರಾಂಶ

ಕಳೆದ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂಡವಾಳಶಾಹಿಗಳ ಏಜೆಂಟಾಗಿ ಕೆಲಸ ಮಾಡಿದ್ದು ಬಿಟ್ಟರೆ ದೇಶಕ್ಕೆ ಅವರ ಕೊಡುಗೆ ಏನೂ ಇಲ್ಲ. ಅವರು ಎಂದೂ ರೈತರು, ಬಡವರ ಪರವಾಗಿ ಯಾವತ್ತು ಕೆಲಸ ಮಾಡಲಿಲ್ಲ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್‌ ಶಿವಮೊಗ್ಗದಲ್ಲಿ ಆರೋಪಿಸಿದ್ದಾರೆ.

- ಪ್ರಧಾನಿ ನರೇಂದ್ರ ಮೋದಿ ಬಂಡವಾಳಶಾಹಿಗಳ ಏಜೆಂಟಾಗಿ ಕೆಲಸ - ದೆಹಲಿಯಲ್ಲಿ ರೈತರು ನಡೆಸಿದ ಚಳವಳಿಯಲ್ಲಿ ಸುಮಾರು 700 ಜನ ಸಾವು - - -

ಶಿವಮೊಗ್ಗ: ಕಳೆದ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂಡವಾಳಶಾಹಿಗಳ ಏಜೆಂಟಾಗಿ ಕೆಲಸ ಮಾಡಿದ್ದು ಬಿಟ್ಟರೆ ದೇಶಕ್ಕೆ ಅವರ ಕೊಡುಗೆ ಏನೂ ಇಲ್ಲ. ಅವರು ಎಂದೂ ರೈತರು, ಬಡವರ ಪರವಾಗಿ ಯಾವತ್ತು ಕೆಲಸ ಮಾಡಲಿಲ್ಲ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್‌ ಆರೋಪಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಧಿಕಾರಕ್ಕೆ ಬರುವ ಮುನ್ನಾ ಪ್ರಧಾನಿ ನರೇಂದ್ರ ಮೋದಿ ಅವರು ರೈತರು ಬೆಳೆದ ಬೆಳೆಗಳಿಗೆ ಲಾಭದ ಬೆಲೆ ಕೊಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಇದನ್ನು ಈಡೇರಿಸಿಲ್ಲ. ಕನಿಷ್ಠ ಬೆಂಬಲ ಬೆಲೆ ಕೊಟ್ಟಿಲ್ಲ. ಈ ಬಗ್ಗೆ ಸುಪ್ರಿಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ಕೂಡ ನೀಡಿತ್ತು. ಇದಕ್ಕೆ ಸ್ವಾಮಿನಾಥನ್ ವರದಿ ಜಾರಿಯಾದರೆ ಆರ್ಥಿಕ ವ್ಯವಸ್ಥೆ ಅಸ್ತವ್ಯಸ್ಥವಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ ಎಂದು ಆರೋಪಿಸಿದರು.

ಕೃಷಿ ತಿದ್ದುಪಡಿ ಕಾಯ್ದೆಗಳ ರದ್ದಿಗೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸಿದ ಚಳವಳಿಯಲ್ಲಿ ಸುಮಾರು 700 ಜನ ಸಾವನ್ನಪ್ಪಿದರು. ಆ ಮೇಲೆ ಕಾಯ್ದೆಯನ್ನು ವಾಪಸ್ ಪಡೆದರು. ಸಂಸದ ರಾಘವೇಂದ್ರ ಅವರು ಪಾರ್ಲಿಮೆಂಟ್‌ನಲ್ಲಿ ಮಲೆನಾಡಿನ ರೈತರ ಸಮಸ್ಯೆ ಕುರಿತು ವರಿಷ್ಠರ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಅಡಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ‌ ಎಂದು ಹೇಳಿ ಅಡಕೆ ಮಾನವನ್ನೇ ತೆಗೆದರು. ಕಳೆದ ಬಾರಿ ಮೋದಿ ಶಿವಮೊಗ್ಗಕ್ಕೆ ಬಂದಾಗ ಅಡಕೆ‌ಮಾನ ಕಾಪಾಡುವುದಾಗಿ ತಿಳಿಸಿದ್ದರು. ಆದರೆ, ಇದುವರೆಗೆ ಈ ಬೇಡಿಕೆಗಳು ಈಡೇರಿಲ್ಲ. ಹೀಗಾಗಿ, ಮಾ.18ರಂದು ಶಿವಮೊಗ್ಗದಲ್ಲಿ ಹಮ್ಮಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಮಲೆನಾಡು ರೈತ ಹೋರಾಟ ಸಮಿತಿ ಬಹಿಷ್ಕಾರ ಹಾಕಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಎ.ಅರ್ಮಾನ್, ಆರ್ಮುಗಂ, ವೇದಮೂರ್ತಿ, ಅರುಣ್ ಇದ್ದರು.

- - -

(-ಫೋಟೋ: ಸಾಂದರ್ಭಿಕ ಚಿತ್ರ)

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ