ಕನ್ನಡಪ್ರಭ ವಾರ್ತೆ ಮಲ್ಕುಂಡಿ
ಬೀಳುವ ಹಂತಕ್ಕೆ ತಲುಪಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು, ಭಯದ ವಾತಾವರಣದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ಬಂದಿದ್ದು, ದುರಸ್ತಿ ಯಾವಾಗ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.ಇದು ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ. ಗ್ರಾಮದ ಉನ್ನತೀಕರಣ ಸರ್ಕಾರಿ ಶಾಲೆಯಲ್ಲಿ ಅತೀ ಹೆಚ್ಚು ಬಡ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಶಾಲೆಯಲ್ಲಿ 220 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ನಾಲ್ಕು ಕೊಠಡಿಗಳು ಸಂಪೂರ್ಣ ದುರಸ್ತಿಯಿಂದ ಮಳೆಯಲ್ಲಿ ಸೋರುತ್ತಿರುವ ಕೊಠಡಿಯಲ್ಲಿ ಕುಳಿತು ಪಾಠ ಕೇಳುವ ಪರಿಸ್ಥಿತಿ ಉಂಟಾಗಿದೆ.
ಶಾಲೆಯ ಕೊಠಡಿಗಳು ಮಳೆ ಬಂದರೆ ತುಂಬಾ ಸೋರುತ್ತಿದ್ದರೂ ಅಧಿಕಾರಿಗಳು ಇತ್ತ ಗಮನ ಹರಿಸದೆ ಇರುವುದು ಸರ್ಕಾರ ಮಕ್ಕಳ ಜೀವನದ ಜೊತೆ ಚೆಲಾಟವಾಡುತ್ತಿವೆ, ಮೊದಲು ಸರ್ಕಾರ ಗ್ಯಾರಂಟಿಗೆ ಒತ್ತು ನೀಡಿವ ಬದಲು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲು ಮುಂದಾಗಬೇಕಾಗಿದೆ.ಗ್ರಾಮದ ಶಾಲೆಯಲ್ಲಿ ಅತೀ ಹೆಚ್ಚು ಬಡ ಕುಟುಂಬದ ಮಕ್ಕಳೇ ವಿದ್ಯಾಭ್ಯಾಸ ಮಾಡುವ ಶಾಲೆಯ ದುರಸ್ತಿ ಭಾಗ್ಯ ದೊರೆಯಬೇಕಾಗಿದೆ, ಮಕ್ಕಳು ತಮ್ಮ ಜೀವವನ್ನು ಕೈಯಲ್ಲಿಡಿದ್ದು ಪಾಠ ಕಲಿಯುವ ಪರಿಸ್ಥಿತಿ ಉಂಟಾಗಿದೆ. ಸುಮಾರು 30 ವರ್ಷಗಳ ಹಿಂದೆ ಕಟ್ಟಡ ನಿರ್ಮಾಣವಾಗಿದ್ದು, ಈಗ ತುಂಬೈ ಸೋರುತ್ತಿದೆ, ಇದರ ಬಗ್ಗೆ ಹಲವು ಬಾರಿ ಸಂಬಂಧ ಪಟ್ಟ ಇಲಾಖೆಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ.
ಮಕ್ಕಳು ಸೋರುತ್ತಿರುವ ಕೊಠಡಿಯಲ್ಲೇ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಸರ್ಕಾರ ಇತ್ತ ಗಮನ ಹರಿಸಿ ಶಾಲೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತದೆಯೇ ಎಂದು ಕಾದು ನೋಡಬೇಕಾಗಿದೆ.ಸರ್ಕಾರ ಗ್ಯಾರಂಟಿ ಯೋಜನೆಯಿಂದ ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ಉಂಟಾಗುತ್ತದೆ, ಗ್ರಾಮದಲ್ಲಿ 30 ವರ್ಷದಿಂದ ಶಾಲೆ ಕಟ್ಟಡ ನಿರ್ಮಾಣವಾಗಿದೆ, ಒಂದು ವರ್ಷದಿಂದ ಶಾಲೆ ಕೊಠಡಿಗಳು ಸೋರುತ್ತಿವೆ, ಸರ್ಕಾರ ಗ್ಯಾರಂಟಿ ಜೊತೆಗೆ ಶಾಲೆ ಕೊಠಡಿಗಳ ಅಭಿವೃದ್ಧಿ ಪಡಿಸಲು ಮುಂದಾಗಬೇಕಿದೆ.ತಾಪಂ ಮಾಜಿ ಸದಸ್ಯ ಎಸ್. ಬಸವರಾಜ್ ಶಾಲೆಯ ಮುಖ್ಯ ಶಿಕ್ಷಕರು ಮನವಿ ಸಲ್ಲಿಸಿದರೆ, ಪರಿಶೀಲಿಸಿ ಮುಂದಿನ ದಿನಗಳಲ್ಲಿ ಸರ್ಕಾರದ ಗಮನಕ್ಕೆ ತಂದು ಕೊಠಡಿ ದುರಸ್ತಿಗೊಳಿಸಲಾಗುವುದು.
- ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ