ಗ್ರಂಥಾಲಯ ನಿರ್ಮಿಸಿದ ಮಲ್ಲವ್ವ ಕಾರ್ಯಕ್ಕೆ ಹೆಬ್ಬಾಳಕರ ಮೆಚ್ಚುಗೆ

KannadaprabhaNewsNetwork |  
Published : Oct 16, 2024, 12:31 AM IST
ಸಚಿವೆ ಲಕ್ಷ್ಮೀ ಹೆಬ್ಬಾಳಕರ | Kannada Prabha

ಸಾರಾಂಶ

ಗೃಹಲಕ್ಷ್ಮಿ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಪಂ ಮಾಜಿ ಅಧ್ಯಕ್ಷೆ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಗೃಹಲಕ್ಷ್ಮಿ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಅಭ್ಯರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯ ನಿರ್ಮಿಸಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಪಂ ಮಾಜಿ ಅಧ್ಯಕ್ಷೆ ಮಲ್ಲವ್ವ ಮೇಟಿ ಅವರ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ.

ಮಲ್ಲವ್ವ ಮೇಟಿ ಅವರ ಕಾರ್ಯ ಇಡೀ ಸಮಾಜಕ್ಕೆ ಹಾಗೂ ರಾಜ್ಯಕ್ಕೆ ಮಾದರಿಯಾಗಿದೆ. ಮಲ್ಲವ್ವ ಮೇಟಿ ಕಾರ್ಯ ನೋಡಿದರೆ ಸಾವಿತ್ರಿಬಾಯಿ ಪುಲೆ ಬಳಿಕ ಆಧುನಿಕ ಅಕ್ಷರದ ಅವ್ವ ಎನ್ನಬಹುದು. ಅವರ ಕಾರ್ಯಕ್ಕೆ ಅಭಿನಂದಿಸಿದ ಸಚಿವರು, ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಹೆಸರಿಡಲು ಸಚಿವರು ಮನವಿ ಮಾಡಿದರು. ಗೃಹಲಕ್ಷ್ಮಿ ಯೋಜನೆಯಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದ್ದು, ಈ ಯೋಜನೆಯ ಹೆಸರು ಅಜರಾಮರವಾಗಿರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೆಸರು ಕೂಡ ಈ ಯೋಜನೆಯ ಮೂಲಕ ಶಾಶ್ವತವಾಗಿ ಉಳಿಯಲಿ ಎಂದು ಹೇಳಿದರು.

ಗ್ರಂಥಾಲಯಕ್ಕೆ ಕಾನೂರು ಹೆಗ್ಗಡತಿ ಪುಸ್ತಕ ಉಡುಗೊರೆ: ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಕಾನೂರು ಹೆಗ್ಗಡತಿ ಪುಸ್ತಕವನ್ನು ಸಚಿವರು ಗ್ರಂಥಾಲಯಕ್ಕೆ ಉಡುಗೊರೆ ನೀಡಿದರು. ಈ ಗ್ರಂಥಾಲಯ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಲಿ. ಇದರ ಸದುಪಯೋಗವನ್ನು ಎಲ್ಲರೂ ಪಡೆಯುವಂತಾಗಲಿ ಎಂದು ಸಚಿವೆ ಹೆಬ್ಬಾಳಕರ ಹಾರೈಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಲಿಕಾನ್‌ ಸಿಟಿಯಲ್ಲಿ ಮಹಾಶಿವರಾತ್ರಿ ಸಂಭ್ರಮ
ಬಿಡಿಎ ಖಾಲಿ ನಿವೇಶನಗಳ ದಂಡದ ಶುಲ್ಕ ಪರಿಷ್ಕರಣೆ