ಕನ್ನಡಪ್ರಭ ವಾರ್ತೆ ಬಳ್ಳಾರಿ
ನಗರದ ವಿವಿಧೆಡೆ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಬಾಲಕ ಸೈಕಲ್ ಮೇಲೆ ಓಡಾಡುತ್ತಿರುವುದು ಹಾಗೂ ಮೊಬೈಲ್‌ನಲ್ಲಿ ಮಾತನಾಡುತ್ತಿರುವುದು ಕಂಡು ಬಂದಿತ್ತು. ಸಿಸಿಟಿವಿಯಲ್ಲಿನ ಆತನ ಚಲನವಲನ ಪರಿಶೀಲಿಸಿ, ಇಲ್ಲಿನ ಗಂಗಪ್ಪ ಜಿನ್ ಬಳಿಯ ಖಾಸಗಿ ಲೇಔಟ್ ಪ್ರದೇಶದಲ್ಲಿ ಬಾಲಕ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಬಳಿಕ, ಬಾಲಕನನ್ನು ವೈದ್ಯಕೀಯ ತಪಾಸಣೆಗೆ ಬಳ್ಳಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಿದ್ದು, ಮಾನಸಿಕ ರೋಗ ತಜ್ಞರು ಹಾಗೂ ಇತರ ವೈದ್ಯರು ಬಾಲಕನ ಕೌನ್ಸೆಲಿಂಗ್ ನಡೆಸಲಿದ್ದಾರೆ. ಇಲ್ಲಿ ಬಾಲಕನ ಸಂಪೂರ್ಣ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಬಳಿಕ ತನಿಖಾಧಿಕಾರಿಗಳು ಬಾಲಕನಿಂದ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುಮೋಟೊ ಪ್ರಕರಣ ದಾಖಲು:ಈ ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಆಯೋಗದಿಂದ ಸೋಮವಾರ ಸುಮೋಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ವಹಿಸಲಾದ ಕ್ರಮಗಳು, ಹಲ್ಲೆಗೆ ಒಳಗಾಗಿ ಮೃತಪಟ್ಟ ಬಾಲಕ ಮತ್ತು ಗಾಯಗೊಂಡ ವಿದ್ಯಾರ್ಥಿಗಳಿಗೆ ಒದಗಿಸಲಾದ ಪರಿಹಾರೋಪಾಯಗಳ ಬಗ್ಗೆ ಮಾಹಿತಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಆಯೋಗದಿಂದ ಪತ್ರ ಬರೆಯಲಾಗಿದೆ.ವಸತಿ ಶಾಲೆಗೆ ಅನುಮತಿ ಇರಲಿಲ್ಲ:
ನಗರದ ತಾಳೂರು ರಸ್ತೆಯ ಗುರುಕುಲ ವಸತಿ ಶಾಲೆಯಲ್ಲಿ ಶನಿವಾರ ರಾತ್ರಿ ನಡೆದ ದಾಳಿ ಪ್ರಕರಣ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಡ್ರಗ್ಸ್, ಗಾಂಜಾ ಪ್ರಕರಣಗಳು ನಗರದಲ್ಲಿ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿ-ಯುವಕರು ಹಾದಿ ತಪ್ಪುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಶಾಲೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲದೇ ಹೋದಲ್ಲಿ ಎಬಿವಿಪಿಯಿಂದ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.