)
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ
ಬುಧವಾರ ರಾತ್ರಿ 11ರಿಂದ ಗುರುವಾರ ಬೆಳಗಿನ 5 ಗಂಟೆ ವೇಳೆಯಲ್ಲಿ ದುರ್ಘಟನೆ ನಡೆದಿದೆ ಎಂದು ಊಹಿಸಲಾಗಿದೆ. ಗ್ರಾಮದ ಜ್ಞಾನ ಸರಸ್ವತಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜತ್ತ ತಾಲೂಕಿನ 35-40 ವಯಸ್ಸಿನ ರಾಜು ಅಲಿಯಾಸ ಪ್ರಕಾಶ ಗ್ರಾಮದಲ್ಲಿ ಕಳೆದ 5 ವರ್ಷಗಳಿಂದ ಎಲೆ ಚೂಟುವ ಕೂಲಿ ಕೆಲಸ ಮಾಡುತ್ತಿದ್ದ. ಗ್ರಾಮದಲ್ಲಿ ಮನೆ ಮಾಡದೇ ಎಲ್ಲೆಂದರಲ್ಲಿ ಮಲಗುತ್ತಿದ್ದ. ಅಪರಿಚಿತ ದುಷ್ಕರ್ಮಿಗಳು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆಂದು ಪತ್ತೆ ಹಚ್ಚಬೇಕಿರುವ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಹಜರು ಕಾರ್ಯ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠ ಸಿದ್ಧಾರ್ಥ ಗೋಯಲ್, ಬನಹಟ್ಟಿ ಸಿಪಿಐ ಆರ್.ಆರ್.ಪಾಟೀಲ, ಬನಹಟ್ಟಿ ಠಾಣಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಆರೋಪಿಗಳ ಶೀಘ್ರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಎಸ್ಪಿ ಸಿದ್ಧಾರ್ಥ ಗೋಯಲ್ ತಿಳಿಸಿದರು.