ಆಕಸ್ಮಿಕವಾಗಿ ಗುಂಡು ಸಿಡಿದು ವ್ಯಕ್ತಿ ಸಾವು

KannadaprabhaNewsNetwork |  
Published : Sep 01, 2026, 02:15 AM IST
31ಎಚ್ಎಸ್ಎನ್14 : ಸಾವನ್ನಪ್ಪಿದ ಕೇಶವ ಶೆಟ್ಟಿ. | Kannada Prabha

ಸಾರಾಂಶ

ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಇದ್ದ ಕಾರಣ, ನಿನ್ನೆ ಸಂಜೆ ಕೇಶವಶೆಟ್ಟಿ ಅವರು ತಮ್ಮ ಜೀವ ರಕ್ಷಣೆಗಾಗಿ ಬಂದೂಕಿನೊಂದಿಗೆ ಕಾಫಿ ತೋಟಕ್ಕೆ ತೆರಳಿದ್ದರು. ಈ ವೇಳೆ ತೋಟದಲ್ಲಿ ನಡೆದು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬಂದೂಕಿನಿಂದ ಗುಂಡು ಹಾರಿರಬಹುದು ಎಂದು ಶಂಕಿಸಲಾಗಿದೆ. ಗುಂಡು ತಗುಲಿದ ನಂತರವೂ ಅವರು ಸುಮಾರು 300 ಮೀಟರ್‌ಗಳಷ್ಟು ದೂರ ನಡೆದುಕೊಂಡು ಬಂದು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶುಭಾನ್ವಿತ ಹಾಗೂ ಸೋಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕನ್ನಡಪ್ರಭ ವಾರ್ತೆ ಬೇಲೂರು ಕಾಡಾನೆಗಳಿಂದ ಜೀವ ರಕ್ಷಣೆಗಾಗಿ ಹಿಡಿದಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಕಾಫಿ ಬೆಳೆಗಾರರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಂದಹಳ್ಳಿ ಗ್ರಾಮದಲ್ಲಿ ನಡೆದಿದೆ.​ಬಂದಹಳ್ಳಿ ಗ್ರಾಮದ ಕೇಶವಶೆಟ್ಟಿ (61) ಮೃತಪಟ್ಟ ಕಾಫಿ ಬೆಳೆಗಾರ. ಗ್ರಾಮದ ಶೈಲೇಶ್ ಎಂಬುವವರಿಗೆ ಸೇರಿದ ಇಶ್ಚಿತ ಎಸ್ಟೇಟ್‌ನಲ್ಲಿ ಈ ದುರಂತ ಸಂಭವಿಸಿದೆ. ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಇದ್ದ ಕಾರಣ, ನಿನ್ನೆ ಸಂಜೆ ಕೇಶವಶೆಟ್ಟಿ ಅವರು ತಮ್ಮ ಜೀವ ರಕ್ಷಣೆಗಾಗಿ ಬಂದೂಕಿನೊಂದಿಗೆ ಕಾಫಿ ತೋಟಕ್ಕೆ ತೆರಳಿದ್ದರು. ಈ ವೇಳೆ ತೋಟದಲ್ಲಿ ನಡೆದು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬಂದೂಕಿನಿಂದ ಗುಂಡು ಹಾರಿರಬಹುದು ಎಂದು ಶಂಕಿಸಲಾಗಿದೆ. ಗುಂಡು ತಗುಲಿದ ನಂತರವೂ ಅವರು ಸುಮಾರು 300 ಮೀಟರ್‌ಗಳಷ್ಟು ದೂರ ನಡೆದುಕೊಂಡು ಬಂದು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶುಭಾನ್ವಿತ ಹಾಗೂ ಸೋಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಕುರಿತು ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಯೋಜನೆಗೆ ಸಿಎಂರಿಂದ ಶೀಘ್ರ ಚಾಲನೆ: ಶಾಸಕ ಕೃಷ್ಣಮೂರ್ತಿ
ಕೋನಿಗರಹಳ್ಳಿ ವೇದಾವತಿ ಮೇಲ್ಸೇತುವೆ ಬಿರುಕು