ಟ್ರ್ಯಾಕ್ಟರ್, ಕಾರು ನಡುವೆ ಮುಖಾಮುಖಿ ವ್ಯಕ್ತಿ ಸಾವು

KannadaprabhaNewsNetwork |  
Published : Mar 06, 2026, 01:30 AM IST
ಸಿಕೆಬಿ-1 ನಗರದ ಪ್ರಶಾಂತ್ ನಗರದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ವತಿಯಿಂದ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಪೊಲೀಸ್ ವಸತಿ ಗೃಹ ಸಮುಚ್ಚಯದ ಶಂಕುಸ್ಥಾಪನೆಯನ್ನು ಸಚಿವ ಡಾ.ಎಂ.ಸಿ. ಸುಧಾಕರ್ ನೆರವೇರಿಸಿದರು | Kannada Prabha

ಸಾರಾಂಶ

ಅಪಘಾತದಲ್ಲಿ ಓರ್ವ ತೀವ್ರವಾದ ಗಾಯಗಳಿಂದ ಸಾವನ್ನಪ್ಪಿದ್ದು, ಇಬ್ಬರು ತೀವ್ರವಾದ ಗಾಯಗಳಿಂದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಲಾರ:ನಗರ ಹೊರವಲಯದ ಟಮಕ ಮೇಲ್ಸೆತುವೆ ಮಾರ್ಗದಲ್ಲಿ ಬುಧವಾರ ರಾತ್ರಿ ಸುಮಾರು 10 ಗಂಟೆಯ ಸಂದರ್ಭದಲ್ಲಿ ಕೋಲಾರದ ಕಡೆಯಿಂದ ಹೋಗುತ್ತಿದ್ದ ಕಾರು ಮತ್ತು ಮುಳಬಾಗಿಲು ಕಡೆಯಿಂದ ಚಪ್ಪಡಿ ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಓರ್ವ ತೀವ್ರವಾದ ಗಾಯಗಳಿಂದ ಸಾವನ್ನಪ್ಪಿದ್ದು, ಇಬ್ಬರು ತೀವ್ರವಾದ ಗಾಯಗಳಿಂದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟವರನ್ನು ಕೋಲಾರ ನಗರಸಭೆ ಮಾಜಿ ಸದಸ್ಯ ಎ.ಪ್ರಸಾದ್ ಬಾಬು ಸಹೋದರ ಡಾ.ಎ.ಶರವಣ್ ಕುಮಾರ್ (40) ಎಂದು ಗುರುತಿಸಲಾಗಿದೆ.

ಮೃತರು ಪತ್ನಿ, ಮಕ್ಕಳು ಆಪಾರ ಬಂಧು ಬಳಗ ಅಗಲಿದ್ದಾರೆ. ಡಾ.ಶರವಣ್ ಕುಮಾರ್ ಜೊತೆಯಲ್ಲಿದ್ದವರು ಹಾಗೂ ಟ್ರ್ಯಾಕ್ಟರ್ ಚಾಲಕ ತೀವ್ರಗಾಯಗಳಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದೆ. ಸಂಚಾರಿ ಪೊಲೀಸರು ಹಾಗೂ ಗಲ್‌ಪೇಟೆ ಪೊಲೀಸರ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವಣಗೆರೆ ಬೈಎಲೆಕ್ಷನ್‌: ಗೆಲುವೇ ಮುಖ್ಯ ಗುರಿ: ರಾಧಾಮೋಹನ ದಾಸ್
ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ