ಅಭಿವೃದ್ಧಿಗಾಗಿ ಪರಿಸರ ಹಾಳು ಮಾಡುತ್ತಿದ್ದಾನೆ ಮನುಷ್ಯ: ನ್ಯಾ. ಚೇತನ್

KannadaprabhaNewsNetwork |  
Published : Jun 07, 2024, 12:33 AM IST
06 ಜೆ.ಎಲ್.ಆರ್ 1) ಜಗಳೂರಿನ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ    ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಚೇತನ್ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಾದೇಶಿಕ ವಲಯಾರಣ್ಯಾಧಿಕಾರಿ ಶ್ರೀನಿವಾಸ್, ಸಾಮಾಜಿಕ ವಲಯಾರಣ್ಯಾಧಿಕಾರಿ ಮಹೇಶ್ವರಪ್ಪ, ಸರ್ಕಾರಿ ವಕೀಲ ಮಂಜುನಾಥ್, ವಕೀಲ ಸಂಘದ ಉಪಾಧ್ಯಕ್ಷ ಬಿ.ಎಸ್ ಪ್ರಕಾಶ್, ವಕೀಲರಾದ   ವಂಶಿ ಮೋಹನ್, ಆರ್. ಓಬಳೇಶ್, ಕೆ.ವಿ ರುದ್ರೇಶ್ ಇದ್ದರು. | Kannada Prabha

ಸಾರಾಂಶ

ಜಗಳೂರು, ಮಾನವ ಸೇರಿದಂತೆ ಪ್ರಾಣಿ, ಪಕ್ಷಿ, ಜೀವ ಸಂಕುಲಗಳು ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಭಿಸಿದ್ದರೂ ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದು ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಚೇತನ್ ಹೇಳಿದರು.

ನ್ಯಾಯಾಲಯ ಆವರಣದಲ್ಲಿ ಪ್ರಾದೇಶಿಕ, ಸಾಮಾಜಿಕ ಅರಣ್ಯ ಇಲಾಖೆ, ವಕೀಲರ ಸಂಘದಿಂದ ವಿಶ್ವ ಪರಿಸರ ದಿನಾಚರಣೆ

ಕನ್ನಡಪ್ರಭ ವಾರ್ತೆ ಜಗಳೂರು

ಮಾನವ ಸೇರಿದಂತೆ ಪ್ರಾಣಿ, ಪಕ್ಷಿ, ಜೀವ ಸಂಕುಲಗಳು ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಭಿಸಿದ್ದರೂ ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂದು ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಚೇತನ್ ಹೇಳಿದರು.ನ್ಯಾಯಾಲಯ ಆವರಣದಲ್ಲಿ ಪ್ರಾದೇಶಿಕ ಹಾಗೂ ಸಾಮಾಜಿಕ ಅರಣ್ಯ ಇಲಾಖೆ, ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಆಧುನಿಕ ಬದುಕಿನ ಗೀಳಿಗೆ ಬಿದ್ದ ಮನುಷ್ಯ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಭೂಮಿ ಮೇಲೆ ಪ್ರಕೃತಿ ಅನೇಕ ಬಾರಿ ತನ್ನ ರೌದ್ರಾವತಾರ ತೋರಿಸಿದೆ. ಆದರೂ ಮನುಷ್ಯ ಅರ್ಥ ಮಾಡಿಕೊಳ್ಳದೇ ಮನಸೋ ಇಚ್ಛೆ ಜೀವಿಸುತ್ತಿದ್ದಾನೆ. ಪರಿಸರ ಕಾಪಾಡದಿದ್ದರೆ ಮುಂದೆ ಅಪಾಯ ತಪ್ಪಿದ್ದಲ್ಲ ಎಂದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಮರೇನಹಳ್ಳಿ ಬಸವರಾಜ್ ಮಾತನಾಡಿ, ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮೂಡಿಸಿ ರಕ್ಷಣೆಗೆ ಉತ್ತೇಜಿಸಲು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರ ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದರು. ಇದೇ ವೇಳೆ ಸಾರ್ವಜನಿಕರು, ವಕೀಲರಿಗೆ ೫೦ಕ್ಕೂ ಹೆಚ್ಚು ಸಸಿಗಳನ್ನು ವಿತರಣೆ ಮಾಡಲಾಯಿತು. ಪ್ರಾದೇಶಿಕ ವಲಯಾರಣ್ಯಾಧಿಕಾರಿ ಶ್ರೀನಿವಾಸ್, ಸಾಮಾಜಿಕ ವಲಯಾರಣ್ಯಾಧಿಕಾರಿ ಮಹೇಶ್ವರಪ್ಪ, ಸರ್ಕಾರಿ ವಕೀಲ ಮಂಜುನಾಥ್, ವಕೀಲ ಸಂಘದ ಉಪಾಧ್ಯಕ್ಷ ಬಿ.ಎಸ್ ಪ್ರಕಾಶ್, ವಕೀಲರಾದ ವಂಶಿ ಮೋಹನ್, ಆರ್. ಓಬಳೇಶ್, ಕೆ.ವಿ ರುದ್ರೇಶ್, ಎ.ಟಿ ತಿಪ್ಪೇಸ್ವಾಮಿ, ತಿಪ್ಪೇಸ್ವಾಮಿ, ನಾಗೇಶ್, ಭೂಪತಿ, ಸೇರಿದಂತೆ ಮತ್ತಿತರರಿದ್ದರು. 06 ಜೆ.ಎಲ್.ಆರ್

ಜಗಳೂರಿನ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಗೆ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಚೇತನ್ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಶ್ರೀನಿವಾಸ್, ಸಾಮಾಜಿಕ ವಲಯ ಅರಣ್ಯಾಧಿಕಾರಿ ಮಹೇಶ್ವರಪ್ಪ, ಸರ್ಕಾರಿ ವಕೀಲ ಮಂಜುನಾಥ್, ವಕೀಲ ಸಂಘದ ಉಪಾಧ್ಯಕ್ಷ ಬಿ.ಎಸ್ ಪ್ರಕಾಶ್, ವಕೀಲರಾದ ವಂಶಿ ಮೋಹನ್, ಆರ್. ಓಬಳೇಶ್, ಕೆ.ವಿ ರುದ್ರೇಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ