ಲಲಿತ ಕಲೆಗಳಿಂದ ಮನುಷ್ಯನ ಬದುಕು ಸಮೃದ್ಧ

KannadaprabhaNewsNetwork |  
Published : Nov 25, 2024, 01:01 AM IST
 ದೊಡ್ಡಬಳ್ಳಾಪುರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾನಪದ ಗೀತೆ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಸಾಹಿತ್ಯ, ಸಂಗೀತ ಮುಂತಾದ ಲಲಿತಕಲೆಗಳಿಂದ ಮನುಷ್ಯನ ಬದುಕು ಸುಸಂಸ್ಕೃತವು ಮತ್ತು ಸಮೃದ್ಧವು ಆಗುತ್ತದೆ ಎಂದು ಜವಾಹರ್ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ದೊಡ್ಡಬಳ್ಳಾಪುರ: ಸಾಹಿತ್ಯ, ಸಂಗೀತ ಮುಂತಾದ ಲಲಿತಕಲೆಗಳಿಂದ ಮನುಷ್ಯನ ಬದುಕು ಸುಸಂಸ್ಕೃತವು ಮತ್ತು ಸಮೃದ್ಧವು ಆಗುತ್ತದೆ ಎಂದು ಜವಾಹರ್ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಯೋಗದಲ್ಲಿ ಜಾನಪದ ಗೀತ ಗಾಯನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯರಾದ ಎಂ.ಕವಿತಾ, ಟಿ.ಸಿ.ಹರ್ಷಿತಾ, ಕೆ.ಯು.ಹರ್ಷಿತಾ, ಬಿ.ಎಂ.ವರ್ಷಿಣಿ, ವಿ.ನಾಗವೇಣಿ, ಎನ್.ಕಾವ್ಯಶ್ರೀ ಅವರನ್ನು ಅಭಿನಂದಿಸಿ ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ ಆಯುಕ್ತ ವೆಂಕಟರಾಜು ಮಾತನಾಡಿ, ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ‌ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಯ್ಕೆಯಾಗಿರುವ ಗೊ.ರು.ಚನ್ನಬಸಪ್ಪ ಅವರು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾಗಿ ಆಗಿ ಮಹತ್ವದ ಸೇವೆ ಸಲ್ಲಿಸಿದವರು. ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ಹಲವಾರು ನೃತ್ಯ ಗೀತೆಗಳನ್ನು ರಚಿಸಿದ್ದಾರೆ. ಜಾನಪದ ವಿದ್ವಾಂಸರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ್ದಾರೆ ಎಂದರು.

ತಾ.ಕಸಾಪ ಗೌರವ ಕಾರ್ಯದರ್ಶಿ ಎ.ಜಯರಾಮ ಮಾತನಾಡಿ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ. ಜಾನಪದ ಸಾಹಿತ್ಯದಲ್ಲಿ ಬದುಕಿನ ಅನುಭವ ಮತ್ತು ಮಾನವೀಯ ಮೌಲ್ಯಗಳನ್ನು ಕಾಣಬಹುದಾಗಿದೆ. ಜಾನಪದ ಎಂಬುದು ಸಾಂಸ್ಕೃತಿಕ ಮತ್ತು ಸಾಮಾಜಿಕ ವ್ಯವಸ್ಥೆಯ ಮೂಲವೇ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ‌ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ನಂಜಪ್ಪ, ಪ್ರೊ.ಸುಷ್ಮಾ, ಪ್ರೊ.ಭಾರತಿ, ಪ್ರೊ.ದಿವ್ಯಶ್ರೀ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಫೋಟೋ-

23ಕೆಡಿಬಿಪಿ1- ದೊಡ್ಡಬಳ್ಳಾಪುರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾನಪದ ಗೀತೆ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ