ಇಂದು ಮಾನಸೋತ್ಸವ, ಡಿ.ಕರಡೀಗೌಡ ಪ್ರಶಸ್ತಿ ಪ್ರದಾನ: ವಿ.ಕೆ.ಜಗದೀಶ್

KannadaprabhaNewsNetwork |  
Published : Feb 09, 2025, 01:15 AM IST
8ಕೆಎಂಎನ್ ಡಿ23 | Kannada Prabha

ಸಾರಾಂಶ

ಸಂಗೀತ ನಿರ್ದೇಶಕ ಹಾಗೂ ಚಲನಚಿತ್ರ ನಟ ಡಾ. ಸಾಧುಕೋಕಿಲ ಅವರಿಗೆ ಸ್ವಾತಂತ್ರ್ಯ ಹೋರಾಟಗಾರ ಡಿ.ಕರಡೀಗೌಡ ಕಲಾ ಕೌಸ್ತುಭ ಪ್ರಶಸ್ತಿ ಮತ್ತು ಖ್ಯಾತಿ ಸಾಹಿತಿ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅವರಿಗೆ ಸ್ವಾತಂತ್ರ್ಯ ಹೋರಾಟಗಾರ ಡಿ.ಕರಡೀಗೌಡ ಸಾಹಿತ್ಯ ವಿಮರ್ಶೆ ರತ್ನ ಪ್ರಶಸ್ತಿಯನ್ನು ಸಾಹಿತಿ ಹಾಗೂ ವಿಮರ್ಶಕ ಡಾ.ನಾಡೋಜ ಬರಗೂರು ರಾಮಚಂದ್ರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಬೆಸಗರಹಳ್ಳಿ ಮಾನಸ ಎಜುಕೇಷನ್ ಟ್ರಸ್ಟ್ ಹಾಗೂ ಮಾನಸ ಸಮೂಹ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಫೆ.9 ರಂದು ಮಾನಸೋತ್ಸವ ನೂತನ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಡಿ.ಕರಡೀಗೌಡ ಪ್ರಶಸ್ತಿ ಪ್ರದಾನ, ಅಭಿನಂದನೆ ಮತ್ತು ಪ್ರತಿಭಾ ಪುರಸ್ಕಾರ ವಿತರಣೆ ಹಮ್ಮಿಕೊಂಡಿರುವುದಾಗಿ ಸಂಸ್ಥೆ ಅಧ್ಯಕ್ಷ ವಿ.ಕೆ.ಜಗದೀಶ್ ತಿಳಿಸಿದರು.

ಪಟ್ಟಣದ ಕ್ರೀಡಾಬಳಗದಲ್ಲಿ ಸುದ್ದಿಗಾರರೊಂದಿಗೆ ತನಾಡಿದ ಅವರು, ಇಂದು ಸಂಜೆ 4 ಗಂಟೆಗೆ ಮಾನಸ ವಿದ್ಯಾಸಂಸ್ಥೆ ಆವರಣದ ಹೊಂಬಾಳಮ್ಮ ಡಿ.ಕರಡೀಗೌಡ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೂತನ ಶಾಲಾ ಕಟ್ಟಡ ಉದ್ಘಾಟಿಸುವರು. ಶಾಸಕ ಕೆ.ಎಂ.ಉದಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸಂಗೀತ ನಿರ್ದೇಶಕ ಹಾಗೂ ಚಲನಚಿತ್ರ ನಟ ಡಾ. ಸಾಧುಕೋಕಿಲ ಅವರಿಗೆ ಸ್ವಾತಂತ್ರ್ಯ ಹೋರಾಟಗಾರ ಡಿ.ಕರಡೀಗೌಡ ಕಲಾ ಕೌಸ್ತುಭ ಪ್ರಶಸ್ತಿ ಮತ್ತು ಖ್ಯಾತಿ ಸಾಹಿತಿ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅವರಿಗೆ ಸ್ವಾತಂತ್ರ್ಯ ಹೋರಾಟಗಾರ ಡಿ.ಕರಡೀಗೌಡ ಸಾಹಿತ್ಯ ವಿಮರ್ಶೆ ರತ್ನ ಪ್ರಶಸ್ತಿ ಯನ್ನು ಸಾಹಿತಿ ಹಾಗೂ ವಿಮರ್ಶಕ ಡಾ.ನಾಡೋಜ ಬರಗೂರು ರಾಮಚಂದ್ರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕರ್ನಾಟಕ ಲೋಕಸೇವಾ ಆಯೋಗ ಸದಸ್ಯರಾದ ಡಾ.ಎಚ್.ಎಸ್.ಭೋಜ್ಯನಾಯಕ್ ಬಡವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ನೆರವೇರಿಸಲಿದ್ದಾರೆ ಎಂದರು.

ಹಿರಿಯ ವಕೀಲ, ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯ ಎಸ್.ಬಸವರಾಜು ಕೀರ್ತಿಶೇಷ ಪುಟ್ಟತಾಯಮ್ಮ ಕೆಂಚೇಗೌಡ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸುವ ಜತೆಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಶಿವರಾಮೇಗೌಡ ಸಿ.ತಿಮ್ಮಯ್ಯ ಸ್ಮರಣಾರ್ಥ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಗೌರವಿಸಲಾಗುವುದು ಎಂದರು.

ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಬೆಂಗಳೂರು ತರಬೇತಿ ಹಾಗೂ ರಾಜ್ಯ ವಿಪತ್ತು ಸ್ಪಂಧನ ಪಡೆಯ ಉಪನಿರ್ದೇಶಕ ಗುರುಲಿಂಗಯ್ಯ, ಅಂಕಣಕಾರ, ಗುಬ್ಬಿಗೂಡು ರಮೇಶ್, ನಿವೃತ್ತ ಬಿ.ಇ.ಓ ಸಿ.ಎಚ್.ಕಾಳೀರಯ್ಯ ಭಾಗವಹಿಸುವರು ಎಂದು ತಿಳಿಸಿದರು.

ಸುದ್ದಿ ಸುದ್ದಿಗೋಷ್ಠಿ ವೇಳೆ ಸಂಸ್ಥೆ ಕಾರ್ಯದರ್ಶಿ ಎಚ್.ಪಿ.ನಾಗರಾಜು, ಖಜಾಂಚಿ ವಿ.ಕೆ.ಸನತ್‌ಕುಮಾರ್ ಇದ್ದರು.

PREV

Recommended Stories

ಸ್ವಾತಂತ್ರ್ಯಕ್ಕಾಗಿ 6.72 ಲಕ್ಷ ಜನ ಮರಣ
ಸಿಡಿದೆದ್ದ ಧರ್ಮಸ್ಥಳ ಭಕ್ತ ಅಭಿಮಾನಿಗಳು