ಕಡ್ಡಾಯವಾಗಿ ಪರೀಕ್ಷಾ ನಿಯಮ ಪಾಲಿಸಿ: ಡಿಸಿ ಎಲ್.ಚಂದ್ರಶೇಖರ ನಾಯಕ

KannadaprabhaNewsNetwork |  
Published : Jan 19, 2024, 01:45 AM ISTUpdated : Jan 19, 2024, 01:46 AM IST
18ಕೆಪಿಆರ್‌ಸಿಆರ್‌02: | Kannada Prabha

ಸಾರಾಂಶ

ಲೋಪದೋಷವಾಗದಂತೆ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ. 20, 21ರಂದು ರಾಯಚೂರಿನಲ್ಲಿ ನಡೆಯಲಿರುವ ಕೆಪಿಎಸ್‌ಸಿ ಪರೀಕ್ಷೆ ಕುರಿತು ಪೂರ್ವ ಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ರಾಯಚೂರು

ಜ.20ಮತ್ತು ಜ.21ರಂದು ನಗರದಲ್ಲಿ ಕರ್ನಾಟಕ ಲೋಕ ಸೇವಾ ಆಯೋಗವು ನಡೆಸುತ್ತಿರುವ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರು 230 ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಹಾಗೂ ಯಾವುದೇ ಲೋಪದೋಷಗಳಾಗದಂತೆ ನಿಯಮಾನುಸಾರವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರು 230 ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಳ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜ.20ರಂದು ರಾಯಚೂರು ತಾಲೂಕು ವ್ಯಾಪ್ತಿಯ 17 ಪರೀಕ್ಷಾ ಕೇಂದ್ರಗಳಲ್ಲಿ 5015 ಹಾಗೂ ಜ.21ರಂದು 21 ಪರೀಕ್ಷಾ ಕೇಂದ್ರಗಳಲ್ಲಿ 6521 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರ 230 ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಜ.20ರಂದು 17 ಪರೀಕ್ಷಾ ಕೇಂದ್ರಗಳಿಗೆ 17 ಮೇಲ್ವಿಚಾರಕರನ್ನು ಮತ್ತು 17 ಸ್ಥಳೀಯ ನಿರೀಕ್ಷಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. 5 ಮಾರ್ಗಾಧಿಕಾರಿಗಳು ಮತ್ತು 4 ವೀಕ್ಷಕರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಜ.21ರಂದು ಬೆಳಗ್ಗೆ 10 ರಿಂದ 11:30 ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ನಡೆಯುವ ಪರೀಕ್ಷೆಗೆ ಒಟ್ಟು 21 ಪರೀಕ್ಷಾ ಕೇಂದ್ರಗಳಿಗೆ 21 ಮೇಲ್ವಿಚಾರಕರನ್ನು ಮತ್ತು 21 ಸ್ಥಳೀಯ ನಿರೀಕ್ಷಣಾಧಿಕಾರಿಗಳನ್ನು ಹಾಗೂ 6 ಮಾರ್ಗಾಧಿಕಾರಿಗಳು ಮತ್ತು 5 ವೀಕ್ಷಕರನ್ನು ನೇಮಿಸಲಾಗಿದೆ ಎಂದರು.

ಪರೀಕ್ಷೆಗಳನ್ನು ಬರೆಯುವ ಅಭ್ಯರ್ಥಿಗಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಬೇಕು. ಕಡ್ಡಾಯವಾಗಿ ಪರೀಕ್ಷಾ ಕೇಂದ್ರಗಳಲ್ಲಿ ನೀರು, ಶೌಚಾಲಯ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರದ ಸುತ್ತಲೂ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ ಭದ್ರತೆ ಒದಗಿಸಬೇಕು. ಪರೀಕ್ಷಾ ಕೇಂದ್ರದ ಒಳಗೆ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಿ, ಎಲೆಕ್ಟ್ರಾನಿಕ್ ಉಪಕರಣಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ನೇಮಕಗೊಂಡ ಮೇಲ್ವಿಚಾರಕರು, ಸ್ಥಳೀಯ ನಿರೀಕ್ಷಣಾಧಿಕಾರಿಗಳು, ಮಾರ್ಗಾಧಿಕಾರಿಗಳು ಹಾಗೂ ವೀಕ್ಷಕರು ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಹಾಗೂ ನಿಯಮಾನುಸಾರವಾಗಿ ನಡೆಸುವಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ ಬಡಿಗೇರ, ಡಯಟ್ನ ಹಿರಿಯ ಉಪನ್ಯಾಸಕರಾದ ಮಲ್ಲಿಕಾರ್ಜುನ, ಶಿವಮ್ಮ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತದಳದ ಅಧಿಕಾರಿಗಳು, ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ