ಮಂಡೆಪಂಡ ಬೋಸ್ ಮೊಣ್ಣಪ್ಪ ಗೆ ಕಾಯಕ ಯೋಗಿ ರಾಜ್ಯಮಟ್ಟದ ಪ್ರಶಸ್ತಿ ಗೌರವ

KannadaprabhaNewsNetwork |  
Published : May 03, 2026, 02:45 AM IST
ಸನ್ಮಾನ ಸಂದರ್ಭ | Kannada Prabha

ಸಾರಾಂಶ

ಕುಶಾಲನಗರದ ನಿವೃತ್ತ ಅರಣ್ಯ ಅಧಿಕಾರಿ ಹಾಗೂ ಸಮಾಜ ಸೇವಕರಾದ ಮಂಡೆಪಂಡ ಬೋಸ್ ಮೊಣ್ಣಪ್ಪ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಾಯಕ ಯೋಗಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರದ ನಿವೃತ್ತ ಅರಣ್ಯ ಅಧಿಕಾರಿ ಹಾಗೂ ಸಮಾಜ ಸೇವಕರಾದ ಮಂಡೆಪಂಡ ಬೋಸ್ ಮೊಣ್ಣಪ್ಪ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಾಯಕ ಯೋಗಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತು.ಬೆಂಗಳೂರಿನ ಹೊಸಕೋಟೆ ಸಮೀಪ ಸೂಲಿಬೆಲೆಯಲ್ಲಿ ಇಸ್ರೋ ಸಂಸ್ಥೆಯ ಅಧ್ಯಕ್ಷ ಹಾಗೂ ಪ್ರಧಾನಿಗಳ ವೈಜ್ಞಾನಿಕ ಸಲಹೆಗಾರರಾದ ಡಾ . ಎ ಎಸ್ ಕಿರಣ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ರಾಜ್ಯದ ವಿವಿಧ ಶೈಕ್ಷಣಿಕ ಜಿಲ್ಲೆಗಳ ಒಟ್ಟು 43 ಸಾಧಕರಿಗೆ ಈ ಸಂದರ್ಭ ಪ್ರಶಸ್ತಿ ನೀಡಲಾಯಿತು.ಪರಿಷತ್ ಸಂಸ್ಥಾಪಕ ಅಧ್ಯಕ್ಷರಾದ ಡಾ ಹುಲಿಕಲ್ ನಟರಾಜ್, ಖ್ಯಾತ ವೈದ್ಯರಾದ ಡಾ ಅಂಜನಪ್ಪ, ಪರಿಷತ್ ಜಿಲ್ಲಾ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ
ರಾಯಲ್‌ ಸ್ಕೂಲ್‌ ಸೌಲಭ್ಯಗಳು ರಾಜ್ಯಕ್ಕೆ ಮಾದರಿ