ಕನ್ನಡಪ್ರಭ ವಾರ್ತೆ ಮಂಡ್ಯ
ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಆಹ್ವಾನ ನೀಡಲಾಗಿದೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲೆಯ ಕಾಂಗ್ರೆಸ್ ಶಾಸಕರು, ವಿಧಾನ ಪರಿಷತ್ ಶಾಸಕರು, ಮಾಜಿ ಶಾಸಕರು, ನಿಗಮ-ಮಂಡಳಿಗಳ ಅಧ್ಯಕ್ಷರು, ಪಕ್ಷ ವಿವಿಧ ವಿಭಾಗದ ಎಲ್ಲ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯ ಸಮಸ್ತ ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೂತ್ ಮಟ್ಟದಿಂದ ಪಕ್ಷವನ್ನು ಸಂಘಟಿಸಲು ಬದ್ಧನಿದ್ದು ವಿಶೇಷವಾಗಿ ಯುವಜನರನ್ನು ಕಾಂಗ್ರೆಸ್ ಪಕ್ಷದ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಒಂದು ಹೊಸ ಕ್ರಿಯಾಯೋಜನೆ ಸಿದ್ಧಪಡಿಸಿರುವುದಾಗಿ ಹೇಳಿದರು.ಪಕ್ಷದ ಜಿಲ್ಲಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುತ್ತಿರುವ ನೆನ್ನೆದುರು ಹಲವು ಕಠಿಣ ಸವಾಲುಗಳಿವೆ. ಪಕ್ಷ ಸಂಘಟನೆ ಜೊತೆಗೆ ಸರ್ಕಾರ ಮತ್ತು ಜನತೆಯ ಮಧ್ಯೆ ಸಂಪರ್ಕ ಸೇತುವೆಯಾಗಿ ಎಲ್ಲಾ ಯೋಜನೆಗಳು, ಸೌಲಭ್ಯಗಳನ್ನು ಅರ್ಹ ಫಲಾನುಭವಿಗೆ ತಲುಪಿಸುವ ಜವಾಬ್ದಾರಿ ನನ್ನ ಮೇಲಿದೆ. ಮುಂಬರುವ ಗ್ರಾಮ, ತಾಲೂಕು, ಜಿಪಂ, ಸಹಕಾರ ಸಂಘಗಳ ಚುನಾವಣೆ, ನಗರಸಭೆ-ಪುರಸಭೆ ಚುನಾವಣೆಗಳು ಹಾಗೂ ಇನ್ನು ಒಂದೂವರೆ ವರ್ಷದಲ್ಲಿ ಎದುರಾಗಲಿರುವ ಶಾಸನಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಪಣ ತೊಡಲು ಟೊಂಕಕಟ್ಟಿ ನಿಂತಿದ್ದೇನೆ ಎಂದು ದೃಢವಾಗಿ ಹೇಳಿದರು.
ಗ್ಯಾರಂಟಿ ಯೋಜನೆಗಳಿಗೆ ಎಸ್‌ಎಸ್‌ಪಿ ಮತ್ತು ಟಿಎಸ್‌ಪಿ ಹಣ ಬಳಸಿರುವ ಕುರಿತು ಕೇಳಿದ ಪ್ರಶ್ನೆಗೆ, ಇದರ ಬಗ್ಗೆ ಪಕ್ಷದ ವೇದಿಕೆಗಳಲ್ಲಿ ನಾಯಕರ ಗಮನಕ್ಕೆ ತರುತ್ತೇನೆ. ದಲಿತರ ಅಭಿವೃದ್ಧಿಗೆ ಮೀಸಲಾದ ಹಣವನ್ನು ಬಳಸುವುದರಿಂದ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಕುರಿತು ಸಲಹೆ ನೀಡಿ ಸರಿಪಡಿಸುವುದಾಗಿ ಭರವಸೆ ನೀಡಿದರು.
ಗೋಷ್ಠಿಯಲ್ಲಿ ತಿಬ್ಬನಹಳ್ಳಿ ರಮೇಶ್, ಸಿ.ಎಂ.ದ್ಯಾವಪ್ಪ, ಆರ್.ಮೋಹನ್‌ಕುಮಾರ್, ವೈ.ಎಂ.ನಿಂಗೇಗೌಡ, ಸಿ.ಎಂ.ಕ್ರಾಂತಿಸಿಂಹ, ಬಿ.ಎಸ್.ಮಂಜು, ವೆಂಕಟೇಶ್ ಇತರರಿದ್ದರು.