ಕನ್ನಡಪ್ರಭ ವಾರ್ತೆ ಮಂಡ್ಯ
೧೯೭೫ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಆಗ ಜಯಪ್ರಕಾಶ್ ನಾರಾಯಣ್ ಅವರು ‘ಸಂಪೂರ್ಣ ಕ್ರಾಂತಿ’ ಕರೆ ನೀಡಿದ್ದರು. ಅದೊಂದು ಐತಿಹಾಸಿಕ ಮಹತ್ವವನ್ನು ಪಡೆದುಕೊಂಡಿತ್ತು. ನಾಗರೀಕ ಸ್ವಾತಂತ್ರ್ಯ ಅಮಾನತುಗೊಳಿಸಿದಾಗ, ರಾಜಕೀಯ ವಿರೋಗಳನ್ನು ಬಂಸಿದಾಗ ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಿದಾಗ ಸಿಡಿದು ನಿಂತ ಜೆಪಿ ಚಳುವಳಿ ದೇಶದ ಇತಿಹಾಸದಲ್ಲಿ ಮಹತ್ವದ್ದಾಗಿದೆ. ಆ ಸನ್ನಿವೇಶದಲ್ಲಿ ಮಂಡ್ಯಕ್ಕೆ ಆಗಮಿಸಿದ್ದ ಅವರು, ಇದೇ ಕ್ಯಾಂಪಸ್ ಆವರಣದಲ್ಲಿ ನಿಂತು ಭಾಷಣ ಮಾಡಿದ್ದರು ಎಂದು ಸ್ಮರಿಸಿದರು.
ಅ.೧೦ರಂದು ಮಧ್ಯಾಹ್ನ ೩ ಗಂಟೆಗೆ ಚುಂಚಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರ ಸಾನಿಧ್ಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜೆಪಿಯವರ ಜನ್ಮ ಜಯಂತಿ ಸಮಿತಿ ಅಧ್ಯಕ್ಷರಾದ ರಘು ಠಾಕೂರ್ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಪಿ.ರವಿಕುಮಾರ್ ಹಾಗೂ ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.ಅ.೧೧ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿ.ಪ. ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ವಿಧಾನಪರಿಷತ್ ಮಾಜಿ ಸದಸ್ಯ ವಿ.ಎಸ್.ಉಗ್ರಪ್ಪ, ಮಾಜಿ ಸಚಿವ ಎಸ್.ಸುರೇಶ್‌ಕುಮಾರ್, ಸೊಗಡು ಶಿವಣ್ಣ, ಸಿ.ಪಿ.ಉಮೇಶ್, ಬಿ.ಎಸ್.ಶಿವಣ್ಣ ಮತ್ತಿತರರು ಪಾಲ್ಗೊಳ್ಳಲಿದ್ದಾರೆಂದು ಕೌಡ್ಲೆ ಚನ್ನಪ್ಪ ಮಾಹಿತಿ ನೀಡಿದರು.
ಅ.೧೬ ರಿಂದ ೨೧ರವರೆಗೆ ಕಾವೇರಿ ಆರತಿ
ಈ ಮೊದಲು ಅ.೧೧ರಿಂದ ೧೬ರವರೆಗೆ ನಿಗದಿಯಾಗಿದ್ದ ಕಾವೇರಿ ಆರತಿ ಕಾರ್ಯಕ್ರಮವನ್ನು ಅ.೧೬ರಿಂದ ೨೧ರವರೆಗೆ ಆಯೋಜಿಸಲಾಗಿದೆ. ಧಾರ್ಮಿಕ ಪೂಜಾ ಕೈಂಕರ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು, ಪ್ರವಾಸಿಗರು ಹಾಗೂ ಭಕ್ತಾದಿಗಳು ಬದಲಾದ ದಿನಾಂಕವನ್ನು ಗಮನಿಸಿ, ಅ.೧೬ರಿಂದ ೨೧ರವರೆಗೆ ನಡೆಯಲಿರುವ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೋರಿದ್ದಾರೆ.