ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ ಅವರ ಗೆಲುವು ಖಚಿತ ಎಂದು ಕಾಂಗ್ರೆಸ್ ಸಮಿತಿ ವಕ್ತಾರ ಸುರೇಶ್ ಕಂಠಿ ತಿಳಿಸಿದರು.ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ನಮ್ಮನ್ನು ಕೈ ಹಿಡಿದಿದೆ. ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದು, ಹಾಗಾಗಿ ವೆಂಕಟರಮಣಗೌಡ ಅವರ ಗೆಲುವು ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.ಮುಖಂಡ ಶಂಕರಲಿಂಗೇಗೌಡ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಡಾ.ರವೀಂದ್ರ ಅವರು ಮಂಡ್ಯ ಜಿಲ್ಲೆಯ ಸ್ವಾಭಿಮಾನದ ಪ್ರಶ್ನೆ ಎತ್ತಿ ಮತಯಾಚನೆ ಮಾಡಿದ್ದರು. ಈಗ ಅವರ ಸ್ವಾಭಿಮಾನ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.
ಗೋಷ್ಠಿಯಲ್ಲಿ ಶ್ರೀರಂಗಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದರಾಜು, ಪ್ರಾಣೇಶ್, ಕುಮಾರಸ್ವಾಮಿ ಉಪಸ್ಥಿತರಿದ್ದರು.ಮತದಾರರಿಗೆ ಬಿ.ಎಲ್.ದೇವರಾಜು ಕೃತಜ್ಞತೆಕೆ.ಆರ್.ಪೇಟೆ:
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಾಲ್ಗೊಂಡು ಶಾಂತಿಯುತವಾಗಿ ಮತದಾನ ಮಾಡಿದ ತಾಲೂಕಿನ ಎಲ್ಲ ಮತದಾರರಿಗೂ ಕಾಂಗ್ರೆಸ್ ಮುಖಂಡ ಬಿ.ಎಲ್.ದೇವರಾಜು ಕೃತಜ್ಞತೆ ಅರ್ಪಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಕ್ಷೇತ್ರದಲ್ಲಿ ಶೇ.80 ಕ್ಕೂ ಅಧಿಕ ಮತದಾನವಾಗಿದೆ. ಪುರುಷರಿಗಿಂತಲೂ ಮಹಿಳಾ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮತ ಚಲಾಯಿಸಿ ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಮಹಿಳಾ ಮತದಾರರ ಮನ ಗೆದ್ದಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರ ಗೆಲುವು ನಿಶ್ಚಿತ ಎಂದು ತಿಳಿಸಿದ್ದಾರೆ.
ಕ್ಷೇತ್ರದಲ್ಲಿ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗೂಡಿ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಶಕ್ತಿ ಹೆಚ್ಚಿದ್ದು ಒಗ್ಗಟ್ಟಿನಿಂದ ಕೆಲಸ ಮಾಡಿದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರಿಗೂ ಅಭಿನಂದನೆ ಸಲ್ಲಿಸಿದ್ದಾರೆ.ಕಾಂಗ್ರೆಸ್‌ನಿಂದ ಡಾ.ಎಚ್.ಎನ್.ರವೀಂದ್ರ ಅಮಾನತುಕನ್ನಡಪ್ರಭ ವಾರ್ತೆ ಮಂಡ್ಯಕಾಂಗ್ರೆಸ್ ಮುಖಂಡ ಡಾ.ಎಚ್.ಎನ್.ರವೀಂದ್ರ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದಲೇ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ ತಿಳಿಸಿದ್ದಾರೆ. ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ವೆಂಕಟರಮಣೇಗೌಡ ಅವರ ವಿರುದ್ಧವಾಗಿ ಚುನಾವಣೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಪಕ್ಷದ ನಾಯಕ ರಾಹುಲ್‌ಗಾಂಧಿ ಅವರನ್ನು ಟೀಕಿಸಿ ಗ್ಯಾರಂಟಿ ಯೋಜನೆಗಳನ್ನೂ ಟೀಕಿಸಿದ್ದಾರೆ. ಆದ ಕಾರಣ ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಿಯಮಾಗಳಿಗಳಂತೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.