ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ನ್ಯಾಯಾಂಗ, ಕಾನೂನು ಸೇವೆಗಳ ಪ್ರಾಧಿಕಾರ. ಸಂಚಾರಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಾಥಾಗೆ ಚಾಲನೆ ನೀಡಿದ ಜಿಲ್ಲಾ ಎಸ್ಪಿ ಶೋಭರಾಣಿ ಮಾತನಾಡಿ, ಯುವ ಜನತೆ ರಸ್ತೆ ಸುರಕ್ಷತಾ ನಿಯಮ ಪಾಲಿಸದ ಕಾರಣ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ ಎಂದರು.
ರಸ್ತೆ ಸುರಕ್ಷತೆ ಬಗ್ಗೆ ಎಲ್ಲರೂ ಜಾಗೃತರಾಗಬೇಕು. ಹೆಲ್ಮೆಟ್ ಧರಿಸದೆ ವಾಹನ ಚಾಲನೆ. ದ್ವಿಚಕ್ರ ವಾಹನಗಳಲ್ಲಿ ಮೂರು ಮಂದಿ ವಾಹನ ಚಾಲನೆ ಮಾಡುವುದು. ವಾಹನ ಚಲಿಸುವಾಗ ಮೊಬೈಲ್ ಬಳಕೆ ಮಾಡುವುದು ಕಾನೂನು ಬಾಹಿರ ಎಂದರು.ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ರಸ್ತೆ ಅಪಘಾತಗಳು, ಪ್ರತಿ ವರ್ಷ ಸುಮಾರು 500 ರಿಂದ 600 ಮಂದಿ ಸಾವನಪ್ಪುತ್ತಿರುವುದು ವಿಷಾದನೀಯ. ಇದನ್ನು ತಡೆಗಟ್ಟಲು ಸುರಕ್ಷತೆ ವಾಹನ ಚಾಲನೆ ಮಾಡುವ ಜೊತೆಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಕಡ್ಡಾಯ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಆನಂದ ಮಾತನಾಡಿ, ವಾಹನ ಚಾಲನೆಯಲ್ಲಿ ಯುವ ಜನತೆ ಸಾಕಷ್ಟು ಪ್ರಮಾಣದಲ್ಲಿ ಸಾವನಪ್ಪುತ್ತಿರುವುದು ವಿಷಾದಕಾರ ಸಂಗತಿಯಾಗಿದೆ. ಯುವ ಜನತೆ ಹಾಗೂ ಸಾರ್ವಜನಿಕರು ಸಂಚಾರಿ ನಿಯಮ ಪಾಲನೆ ಮಾಡುವುದು ಕಡ್ಡಾಯ ಎಂದರುಜಾಥಾದಲ್ಲಿ ಅಪರ ಪೊಲೀಸ್ ವರಿಷ್ಟಧಿಕಾರಿ ತಿಮ್ಮಯ್ಯ, ಗಂಗಾಧರಸ್ವಾಮಿ, ಪಿಯು ಡಿಡಿ ಚೆಲುವಯ್ಯ, ಮಂಡ್ಯ ಉಪ ವಿಭಾಗ ಉಪಾಧೀಕ್ಷ ಹೆಚ್.ಲಕ್ಷ್ಮೀ ನಾರಾಯಣ ಪ್ರಸಾದ್, ಸಂಚಾರ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಹೆಚ್.ಆರ್.ಸಿದ್ದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.