ಕನ್ನಡಪ್ರಭ ವಾರ್ತೆ ಮಂಡ್ಯ
ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ, ಅಲ್ಮೇರಾ, ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸುವಂತೆ ಒತ್ತಾಯಿಸಿದರು.
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನಶ್ರೇಣಿ ನಿಗಪಡಿಸಿ ಆದೇಶ ನೀಡುವುದು. ಸೇವಾ ವಿಷಯಗಳಿಗೆ ಸಂಬಂಸಿದಂತೆ ಸೌಲಭ್ಯಗಳನ್ನು ಕಲ್ಪಿಸುವುದು. ಅಂತರ ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ ೧೬ಎರ ಉಪಖಂಡ (೨)ನ್ನು ಮರುಸ್ಥಾಪಿಸುವಂತೆ ಆಗ್ರಹಿಸಿದರು.ಮುಖಂಡರಾದ ಯೋಗೇಶ್ ನಾಯ್ಕ್, ಕುಮಾರ, ಗುಣಶೇಖರ್, ಮಾನಸ, ತೇಜಸ್‌ಗೌಡ, ಚರಣ್, ಸಿದ್ದಪ್ಪ, ಮಧುರಾಣಿ, ಇಂದ್ರಾಣಿ, ಮನುಜ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಶಾಸಕರ ಕಚೇರಿಯನ್ನು ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿರುವ ಸಂಬಂಧ ದೂರು ದಾಖಲಿಸಿರುವುದಕ್ಕೆ ಪುರಸಭೆ ಆಡಳಿತ ಮಂಡಳಿ ಗುತ್ತಿಗೆದಾರ ಸಂಸ್ಥೆಗೆ ಪತ್ರ ಬರೆದು ಸೇವೆಯಿಂದ ವಜಾ ಮಾಡಿದೆ. ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸುವಂತೆ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಇತ್ತೀಚೆಗೆ ಮದ್ದೂರು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಶಾಸಕರು ಹೋರಾಟಗಾರರ ಬಗ್ಗೆ ಅವಹೇಳನವಾಗಿ ಮಾತನಾಡಿದ್ದು, ಅವರು ತಮ್ಮ ಹೇಳಿಕೆಯನ್ನು ಸಾಬೀತು ಮಾಡಿದರೆ ಹೋರಾಟ ಜೀವನದಿಂದ ಹೊರಗುಳಿಯುವುದಾಗಿ ಹೇಳಿದರು.
ಲಕ್ಷ್ಮಣ್ ಚೀರನಹಳ್ಳಿ ಮಾತನಾಡಿ, ಪುರಸಭೆಯ ಅಧ್ಯಕ್ಷ ಪುರಸಭೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ಗಮನ ಹರಿಸದೇ ಸಣ್ಣ ತಪ್ಪು ಮಾಡಿರುವ ನೌಕರರ ವಿರುದ್ಧ ಈ ರೀತಿಯ ಕ್ರಮ ವಹಿಸುವುದು ಸರಿಯಲ್ಲ. ಶಾಸಕರು ನೌಕರನಿಗೆ ಮತ್ತೆ ಕೆಲಸ ದೊರಕಿಸಿಕೊಟ್ಟು ಪುರಸಭೆಯ ಸಮಸ್ಯೆಗಳತ್ತ ಗಮನ ಹರಿಸುವಂತೆ ಮನವಿ ಮಾಡಿದರು.