ಮಂಗಳೂರು: ಮಂಗಳಾದೇವಿ ದೇವಸ್ಥಾನದ ರಥಬೀದಿಯಲ್ಲಿ ರಸ್ತೆ ವಿಭಜಕ ಅಳವಡಿಸುವುದರಿಂದ, ಶತಮಾನಗಳ ಪರಂಪರೆ ಹೊಂದಿರುವ ಅಲ್ಲಿನ ಬ್ರಹ್ಮರಥೋತ್ಸವದ ಸುಗಮ ಸಂಚಾರಕ್ಕೆ ಅಡ್ಡಿಯಾಗಲಿದ್ದು, ಕೂಡಲೇ ಆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಶಾಸಕ ವೇದವ್ಯಾಸ ಕಾಮತ್ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಹೀಗಿರುವಾಗ ರಥಬೀದಿಯ ಮಧ್ಯಭಾಗದಲ್ಲಿ ರಸ್ತೆ ವಿಭಜಕ ಅಳವಡಿಸಿದಲ್ಲಿ ರಥದ ಸುಗಮ ಸಂಚಾರಕ್ಕೆ, ಭಕ್ತರಿಗೆ ಇನ್ನಿಲ್ಲದ ತೊಂದರೆಯಾಗುವ ಸಾಧ್ಯತೆಯಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಕಳವಳ ವ್ಯಕ್ತಪಡಿಸಿರುವುದು ಸರಿಯಿದೆ. ಹಾಗಾಗಿ ಇಲ್ಲಿ ಈಗಾಗಲೇ ಅಗಲವಾಗಿರುವ ರಸ್ತೆಯನ್ನು ಅದೇ ಮಾದರಿಯಲ್ಲಿ ಉಳಿಸಿಕೊಳ್ಳುವಂತೆ ಹಾಗೂ ರಸ್ತೆ ವಿಭಜಕ ಪ್ರಸ್ತಾವನೆಯನ್ನು ಕೈಬಿಡುವಂತೆ ಪಾಲಿಕೆ ಆಯುಕ್ತರಿಗೆ ಆಗ್ರಹಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.