ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನಿಂದ ಯುಗಾದಿ ಸಂಭ್ರಮ

KannadaprabhaNewsNetwork |  
Published : Apr 15, 2026, 03:00 AM IST
ಯುಗಾದಿ ಸಂಭ್ರಮ ಕಾರ್ಯಕ್ರಮ | Kannada Prabha

ಸಾರಾಂಶ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಸಮಿತಿ ಮತ್ತು ಥಿಯೊಸೊಫಿಕಲ್ ಸೊಸೈಟಿ ಮಂಗಳೂರು ವತಿಯಿಂದ ಯುಗಾದಿ ಸಂಭ್ರಮ ಕಾರ್ಯಕ್ರಮ ನಗರದ ಕೊಡಿಯಾಲ್‌ಬೈಲ್‌ನ ಥಿಯೊಸೊಫಿಕಲ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಸಮಿತಿ ಮತ್ತು ಥಿಯೊಸೊಫಿಕಲ್ ಸೊಸೈಟಿ ಮಂಗಳೂರು ವತಿಯಿಂದ ಯುಗಾದಿ ಸಂಭ್ರಮ ಕಾರ್ಯಕ್ರಮ ನಗರದ ಕೊಡಿಯಾಲ್‌ಬೈಲ್‌ನ ಥಿಯೊಸೊಫಿಕಲ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಥಿಯೊಸೊಫಿಕಲ್ ಸೊಸೈಟಿ ಮಂಗಳೂರು ಅಧ್ಯಕ್ಷ ವಿದ್ವಾನ್ ತುಪ್ಪೆಕಲ್ಲು ನರಸಿಂಹ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುಗಾದಿ ಹಬ್ಬ ಪ್ರಕೃತಿಯೊಂದಿಗೆ

ಮನುಷ್ಯನ ಸಂಬಂಧವನ್ನು ಗಟ್ಟಿಗೊಳಿಸುವ ಸಾಂಪ್ರದಾಯಿಕ ಆಚರಣೆಯಾಗಿದೆ. ಬೇವು ಬೆಲ್ಲ ಸವಿಯುವ ಮೂಲಕ ಜೀವನದ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸುವ ಸಂದೇಶವನ್ನು ಯುಗಾದಿ ಆಚರಣೆಯಿಂದ ಸಾರಲಾಗುತ್ತಿದೆ ಎಂದರು.

ಥಿಯೊಸೊಫಿಕಲ್ ಸೊಸೈಟಿ ಕಾರ್ಯದರ್ಶಿ ಪ್ರೊ.ಕೃಷ್ಣಾನಂದ ಶೆಣೈ ಆಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ ಚಟುವಟಿಕೆಗಳಿಗೆ ಆರಂಭ ನೀಡುವ ಯುಗಾದಿ ಆಚರಣೆ ನಮ್ಮ ಸಂಸ್ಕೃತಿ ಮತ್ತು ಸಮೃದ್ಧಿಯ ಸಂಕೇತವಾಗಿದೆ ಎಂದರು.ಅಭಾಸಾಪ ಜಿಲ್ಲಾ ಸಮಿತಿ ಸದಸ್ಯ ಪಿ.ಬಿ.ಹರೀಶ್ ರೈ, ದಿವಾನ್ ಕೇಶವ ಭಟ್, ಅಭಾಸಾಪ ಜಿಲ್ಲಾ ಕಾರ್ಯದರ್ಶಿ ಲತೇಶ್ ಬಾಕ್ರಬೈಲ್ ಇದ್ದರು.

ಅಭಾಸಾಪ ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷೆ ಡಾ.ಮೀನಾಕ್ಷಿ ರಾಮಚಂದ್ರ ಸ್ವಾಗತಿಸಿ, ಚಂದ್ರಪ್ರಭಾ ದಿವಾಕರ್ ವಂದಿಸಿದರು. ಪ್ರೊ.ಶೈಲಜಾ ಪುದುಕೋಳಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಂಡ, ಸೋಮೆಯಂಡ, ಕೊಂಗೆಟೀರ ಭರ್ಜರಿ ಜಯಬೇರಿ
ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸೋಣ: ಜಗದೀಶ್ ಆಚಾರ್ಯ ಕಪ್ಪೆಟ್ಟು