ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಆತ್ಮಸಮ್ಮಾನ ಕಾರ್ಯಕ್ರಮವನ್ನು ಸಂಘದ ಪ್ರಧಾನ ಕಚೇರಿ ಪಡೀಲ್‌ನಲ್ಲಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷೆ, ನ್ಯಾಯವಾದಿ ಸುಮನಾ ಶರಣ್ ಮಾತನಾಡಿ, ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಉದ್ಯೋಗದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಈ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಡ ಮಹಿಳೆಯೇ ಆಗಿದ್ದಾರೆ. ಮಹಿಳೆಯರು ಉನ್ನತ ಹುದ್ದೆಯನ್ನು ಅಲಂಕರಿಸುವುದು ತುಂಬಾ ಕಡಿಮೆ. ಆದರೆ ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿರುವುದು ಶ್ಲಾಘನೀಯ. ಸಹಕಾರಿ ಚುನಾವಣೆಯಲ್ಲಿ ಮಹಿಳೆಯರಿಗೆ ೧೩ ಸೀಟುಗಳಲ್ಲಿ ಎರಡು ಸೀಟು ಮಾತ್ರ ಮೀಸಲಾತಿ ಇದೆ. ಮುಂದಿನ ದಿನಗಳಲ್ಲಿ ಈ ಮೀಸಲಾತಿಯು ಶೇ.೫೦ ಆಗಬೇಕು ಎಂಬ ಆಶಯ ವ್ಯಕ್ತಪಡಿಸಿದರುಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕ ಮಹಿಳೆಯರಾದ ಸಾಹಿತಿಗಳು, ಸಮಾಜ ಸೇವಕರು ಹಾಗೂ ನಿವೃತ್ತ ಪ್ರಾಂಶುಪಾಲೆ ಶಶಿಲೇಖಾ ಬಿ. ಹಾಗೂ ಪ್ರಾಣಿ ದಯಾಪರರಾದ ಉಷಾ ಸುವರ್ಣ ರವರನ್ನು ಸಂಘದ ಅಧ್ಯಕ್ಷದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಸನ್ಮಾನಿಸುವ ಮೂಲಕ ಗೌರವಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಪ್ರಾಂಶುಪಾಲೆ ಶಶಿಲೇಖಾ ಬಿ. ರವರು, ಮಹಿಳಾ ದಿನವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಬಾರದು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗವಕಾಶವನ್ನು ನೀಡಿದ್ದು, ಕೇವಲ ಬ್ಯಾಂಕಿಂಗ್ ಸೇವೆಗೆ ಸೀಮಿತವಾಗಿರದೇ ಇತರ ಸಮಾಜಮುಖಿ ಚಟುವಟಿಕೆಗಳನ್ನು ವರ್ಷಂಪ್ರತಿ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವರ್ಷಂಪ್ರತಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಾಧಕ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಆಚರಿಸಿಕೊಂಡು ಬರುತ್ತಿದೆ. ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಸಂಘ ಶೇ. ೯೫ ರಷ್ಟು ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗವನ್ನು ನೀಡಿದ್ದು, ಮಹಿಳೆಯರು ಜೀವನದಲ್ಲಿ ಉತ್ತಮವಾದ ಸ್ಥಾನವನ್ನು ಇರಬೇಕು ಎಂಬುದು ಸಂಘದ ಆಶಯವಾಗಿದೆ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ೩೦ ಶಾಖೆಗಳ ಶಾಖಾಧಿಕಾರಿಗಳು ಕೂಡ ಮಹಿಳೆಯರೇ ಆಗಿದ್ದಾರೆ ಎಂದರು.ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಗೋಪಾಲ್ ಎಂ. ಚಂದ್ರಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್‌ನ ಗೌರವ ಅಧ್ಯಕ್ಷ ವಾಮನ್ ಕೆ. ಅಧ್ಯಕ್ಷ ಗೋಪಾಲ ಪೂಜಾರಿ ವೀರನಗರ, ಜೊತೆ ಕಾರ್ಯದರ್ಶಿ ವಿಶ್ವನಾಥ ರೆಂಜಾಳ ಮತ್ತಿತ್ತರರು ಇದ್ದರು.ಸಂಘದ ಉಳ್ಳಾಲ ಶಾಖೆಯ ಶಾಖಾಧಿಕಾರಿ ಸಚಿನ್ ಸ್ವಾಗತಿಸಿದರು. ಗಂಜಿಮಠ ಶಾಖಾಧಿಕಾರಿ ಸಂದೀಪ್ ವಂದಿಸಿದರು. ಸಂಘದ ಸಹಾಯಕ ಪ್ರಬಂಧಕ ವಿಶ್ವನಾಥ ನಿರೂಪಿಸಿದರು.