ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಬೆಂಗರೆ ಸ್ಯಾಂಡ್ ಪಿಟ್ ಬೆಂಗರೆ ಬಳಿ ಅಭಿವೃದ್ಧಿ ಕಾಮಗಾರಿಯು ವಿಶೇಷ ಅನುದಾನದಲ್ಲಿ ನಡೆಯಲಿದ್ದು, ಇತ್ತೀಚೆಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು.
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಬೆಂಗರೆ ಸ್ಯಾಂಡ್ ಪಿಟ್ ಬೆಂಗರೆ ಬಳಿ ಅಭಿವೃದ್ಧಿ ಕಾಮಗಾರಿಯು ವಿಶೇಷ ಅನುದಾನದಲ್ಲಿ ನಡೆಯಲಿದ್ದು, ಇತ್ತೀಚೆಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು.
ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯದ ಬೇಡಿಕೆಗೆ ಅನುಗುಣವಾಗಿ ಅನುದಾನಗಳನ್ನು ಹೊಂದಿಸಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲಿ ಪೂರ್ಣವಾಗಲಿದೆ ಎಂದು ಭರವಸೆ ನೀಡಿದರು. ಈ ಸಂದರ್ಭ ಪ್ರಮುಖರಾದ ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ, ಜೀವನ್ ಖಾರ್ವಿ ಮತ್ತಿತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.