ಉಡುಪಿ: ಮಂಗಳೂರು ಕುದ್ರೋಳಿಯ ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಎಲ್ಲಾ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ ಇದೇ ಪ್ರಪ್ರಥಮ ಬಾರಿಗೆ ‘ಜಾಗತಿಕ ಬಿಲ್ಲವರ ಕ್ರೀಡೋತ್ಸವ’ ಮುಂಬರುವ ಜ.18ರಂದು ಮಂಗಳೂರಿನ ನೆಹರು ಮೈದಾನದಲ್ಲಿ ಸಂಸ್ಥೆಯ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ನೇತೃತ್ವದಲ್ಲಿ ನಡೆಯಲಿದೆ.
ಪುರುಷರು ಹಾಗೂ ಮಹಿಳೆಯರ ವಿಭಾಗದಲ್ಲಿ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟ ಮತ್ತು ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟವಿದೆ. ಪುರುಷರ ಕಬ್ಬಡ್ಡಿ ಪಂದ್ಯಾಟದಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ 2 ಲಕ್ಷ ರು., ದ್ವಿತೀಯ 1 ಲಕ್ಷ ರು, ತೃತೀಯ 50 ಸಾವಿರ ರು., ಚತುರ್ಥ 25 ಸಾವಿರ ರು.. ನಗದು ಮತ್ತು ಟ್ರೋಫಿ ನೀಡಲಾಗುವುದು ಎಂದರು.
ಮಹಿಳಾ ಕಬ್ಬಡ್ಡಿ, ಥ್ರೋಬಾಲ್ ಮತ್ತು ಪುರುಷರ ವಾಲಿಬಾಲ್ ವಿಜೇತರಿಗೆ ಪ್ರಥಮ ಬಹುಮಾನ 1 ಲಕ್ಷ ರು., ದ್ವಿತೀಯ 50 ಸಾವಿರ ರು., ತೃತೀಯ 25 ಸಾವಿರ ರು. ಹಾಗೂ ಚತುರ್ಥ 10 ಸಾವಿರ ರು. ಮತ್ತು ಟ್ರೋಫಿ ನೀಡಲಾಗುವುದು. ಉತ್ತಮ ಪ್ರದರ್ಶನ ನೀಡುವ ಕ್ರೀಡಾಪಟುಗಳಿಗೆ ವೈಯುಕ್ತಿಕ ಬಹುಮಾನ ಕೂಡಾ ಇರಲಿದೆ ಎಂದು ಅವರು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಕ್ರೀಡಾಕೂಟದ ಪ್ರಧಾನ ಸಂಚಾಲಕ ಸದಾನಂದ ಪೂಜಾರಿ, ಹಿರಿಯ ಕಬಡ್ಡಿ ಆಟಗಾರ್ತಿ ಅಮಿತಾ ನಿತ್ಯಾನಂದ, ಪ್ರಮುಖರಾದ ಮಿಥುನ್ ಅಮೀನ್, ಶಬರಿ ಸುವರ್ಣ, ಗಣೇಶ್ ಕೋಟ್ಯಾನ್, ಲಕ್ಷ್ಮಣ ಪೂಜಾರಿ, ಬನ್ನಂಜೆ ಬಿಲ್ಲವ ಸಂಘದ ಪದಾಧಿಕಾರಿ ವಿಶ್ವನಾಥ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಪದಾಧಿಕಾರಿ ಸುಕುಮಾರ್ ಉಪಸ್ಥಿತರಿದ್ದರು.