ಮಂಗಳೂರ: ಭವ್ಯ ಸಂಡೇಸ್ ಆನ್ ಸೈಕಲ್‌ ಜಾಥಾ

KannadaprabhaNewsNetwork |  
Published : Jun 08, 2026, 04:00 AM IST
 | Kannada Prabha

ಸಾರಾಂಶ

ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇರಾ ಯುವ ಭಾರತ ದಕ್ಷಿಣ ಕನ್ನಡ ವತಿಯಿಂದ ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್ ಎಂಬ ಧ್ಯೇಯವಾಕ್ಯದೊಂದಿಗೆ ಭವ್ಯ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಭಾನುವಾರ ಮಂಗಳೂರಿನಲ್ಲಿ ನಡೆಯಿತು.

ಮಂಗಳೂರು: ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇರಾ ಯುವ ಭಾರತ ದಕ್ಷಿಣ ಕನ್ನಡ ವತಿಯಿಂದ ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್ ಎಂಬ ಧ್ಯೇಯವಾಕ್ಯದೊಂದಿಗೆ ಭವ್ಯ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಭಾನುವಾರ ಮಂಗಳೂರಿನಲ್ಲಿ ನಡೆಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ, ಎನ್‌ಎಸ್‌ಎಸ್ ಮಂಗಳೂರು ವಿಶ್ವವಿದ್ಯಾಲಯ, ಫ್ರೀಜಿಂಗ್ ಸನ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್ ಬೀಚ್ ರನ್ನರ್ಸ್ ಹಾಗೂ ವಿ ಆರ್ ಸೈಕ್ಲಿಂಗ್ ಕ್ಲಬ್ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು.

ಮಂಗಳೂರಿನ ಮಂಗಳಾ ಕ್ರೀಡಾಂಗಣದಿಂದ ಸೈಕಲ್ ಜಾಥಾಕ್ಕೆ ಚಾಲನೆ ನೀಡಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಅವರು ಉದ್ಘಾಟಿಸಿ ಮಾತನಾಡಿ, ಆರೋಗ್ಯಕರ ಜೀವನಕ್ಕಾಗಿ ಸೈಕ್ಲಿಂಗ್ ಅತ್ಯಂತ ಪರಿಣಾಮಕಾರಿ ಸಾಧನವಾಗಿದ್ದು, ಪರಿಸರ ಸಂರಕ್ಷಣೆಯಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ ಎಂದರು.

ಮೇರಾ ಯುವ ಭಾರತ್ ಉಪನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ. ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಜಗದೀಶ್ ಕೆ., ಶೇಷಪ್ಪ ಅಮೀನ್, ಚಿತ್ತರಂಜನ್ ಬೋಳಾರ್, ಪರಾಂಜಲಿ, ಮಾರಿಯಾ, ದಿನೇಶ್ ಅತ್ತಾವರ, ಅನಿಲ್ ಶೆಟ್, ಹರ್ನಿಶ್, ಹಾರ್ದಿಕ್ ರೈ ಮತ್ತಿತರರು ಇದ್ದರು.

ಮಂಗಳಾ ಕ್ರೀಡಾಂಗಣದಿಂದ ಆರಂಭವಾದ ಜಾಥಾ ನಗರದ ಪ್ರಮುಖ ಪ್ರದೇಶಗಳಾದ ಕಾರ್ ಸ್ಟ್ರೀಟ್, ಕ್ಲಾಕ್ ಟವರ್, ಪಿವಿಎಸ್ ಸರ್ಕಲ್, ಲಾಲ್‌ಬಾಗ್ ಹಾಗೂ ಲೇಡಿ ಹಿಲ್ ಮಾರ್ಗವಾಗಿ ಸಂಚರಿಸಿ ಮತ್ತೆ ಮಂಗಳಾ ಕ್ರೀಡಾಂಗಣದಲ್ಲಿ ಸಮಾಪ್ತಿಗೊಂಡಿತು. ಭಾಗವಹಿಸಿದವರು ಫಿಟ್ ಇಂಡಿಯಾ ಅಭಿಯಾನ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜಾಥಾ ಬಳಿಕ ಮಂಗಳಾ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಖಾಸಗಿ ಶಾಲೆ ಬಸ್‌
ಜಮಖಂಡಿ ವಿವಿಧೆಡೆ ಸರಿದ ಮಳೆ, ತಂಪಾದ ಇಳೆ