ಎಂಆರ್‌ಪಿಎಲ್‌ನಿಂದ ವೆನ್ಲಾಕ್‌ ಆಸ್ಪತ್ರೆಗೆ ಫಿಸಿಯೋಥೆರಪಿ ಸಾಧನಗಳ ನೆರವು

KannadaprabhaNewsNetwork |  
Published : Mar 19, 2026, 02:45 AM IST
ಎಂಆರ್‌ಪಿಎಲ್‌ನಿಂದ ವೆನ್ಲಾಕ್‌ ಆಸ್ಪತ್ರೆಗೆ ಫಿಸಿಯೋಥೆರಪಿ ಸಾಧನಗಳ ನೆರವು ಹಸ್ತಾಂತರ  | Kannada Prabha

ಸಾರಾಂಶ

ಸಾರ್ವಜನಿಕ ಆರೋಗ್ಯ ಸೇವೆಗಳ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರಿ ಸ್ವಾಮ್ಯದ ಎಂಆರ್‌ಪಿಎಲ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮದ ಅಂಗವಾಗಿ ಮಂಗಳೂರು ನಗರದಲ್ಲಿರುವ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆಗೆ ಅಗತ್ಯ ಫಿಸಿಯೋಥೆರಪಿ ಸಾಧನಗಳನ್ನು ಪ್ರಾಯೋಜಿಸಿದೆ.

ಮಂಗಳೂರು: ಸಾರ್ವಜನಿಕ ಆರೋಗ್ಯ ಸೇವೆಗಳ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರಿ ಸ್ವಾಮ್ಯದ ಎಂಆರ್‌ಪಿಎಲ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮದ ಅಂಗವಾಗಿ ಮಂಗಳೂರು ನಗರದಲ್ಲಿರುವ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆಗೆ ಅಗತ್ಯ ಫಿಸಿಯೋಥೆರಪಿ ಸಾಧನಗಳನ್ನು ಪ್ರಾಯೋಜಿಸಿದೆ.

ಈ ಸಾಧನಗಳನ್ನು ಇತ್ತೀಚೆಗೆ ಆಸ್ಪತ್ರೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‌ ಮಂಗಳೂರು ಇದರ ವತಿಯಿಂದ ಹಸ್ತಾಂತರಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ವರ್ಗದ ರೋಗಿಗಳಿಗೆ ಉತ್ತಮ ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆ ಕೈಗೊಳ್ಳಲಾಗಿದೆ.

2025–26ನೇ ಸಾಲಿನ ರೋಟರಿ ಜಿಲ್ಲಾ ಅನುದಾನ ಯೋಜನೆಯಡಿಯಲ್ಲಿ ಆಸ್ಪತ್ರೆಗಳಿಗೆ ಪುನರ್ವಸತಿ ಸೌಲಭ್ಯಗಳು, ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸಾ ಉಪಕರಣಗಳು ಮತ್ತು ಫಿಸಿಯೋಥೆರಪಿ ಸಾಧನಗಳನ್ನು ಒದಗಿಸುವಲ್ಲಿ ರೋಟರಿ ಕ್ಲಬ್ ಪ್ರಮುಖ ಪಾತ್ರ ವಹಿಸಿದೆ.

ಕಾರ್ಯಕ್ರಮದಲ್ಲಿ ರೋಟರಿ ಇಂಟರ್‌ನ್ಯಾಷನಲ್ ಜಿಲ್ಲಾ ಗವರ್ನರ್ ಪಿ.ಕೆ. ರಾಮಕೃಷ್ಣ ಮತ್ತು ಸಹಾಯಕ ಗವರ್ನರ್ ರಜನಿ ಆರ್. ಭಟ್ ಇದ್ದರು.ಎಂಆರ್‌ಪಿಎಲ್ ಪರವಾಗಿ ಸಿಜಿಎಂ (ಆಡಳಿತ) ಪ್ರಶಾಂತ್ ಬಾಳಿಗಾ ಮತ್ತು ಸಿಎಸ್ಆರ್ ಮ್ಯಾನೇಜರ್ ಕೇಶವ ಪಾಟಾಳಿ ಭಾಗವಹಿಸಿದ್ದರು. ಆಸ್ಪತ್ರೆಯ ಪರವಾಗಿ ಜಿಲ್ಲಾ ಶಸ್ತ್ರಚಿಕಿತ್ಸಾ ಮತ್ತು ಅಧೀಕ್ಷಕ ಡಾ. ಶಿವಪ್ರಸಾದ್, ನಿವಾಸಿ ವೈದ್ಯಾಧಿಕಾರಿ ಡಾ. ಸುಧಾಕರ್ ಟಿ. ಹಾಗೂ ಯುರಾಲಜಿ ವಿಭಾಗದ ಮುಖ್ಯಸ್ಥ ಡಾ. ಸದಾನಂದ ಪೂಜಾರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲ್‌ ಟಿಕೆಟ್‌ ಸಿಗದೆ 25 ವಿದ್ಯಾರ್ಥಿಗಳು ಪರೀಕ್ಷೆ ವಂಚಿತ
ನೈತಿಕ ಮೌಲ್ಯ ಕಾಪಾಡಿದ ಅವಿಭಕ್ತ ಕುಟುಂಬಗಳು