ಮಂಗಳೂರು: ಶಿಕ್ಷಣದಲ್ಲಿ ಕಲೆಗಳು ಕೇವಲ ಒಂದು ವಿಷಯವಲ್ಲ. ಬದಲಿಗೆ ಕಲಿಕೆಯ ಅನುಭವಗಳನ್ನು ಶ್ರೀಮಂತಗೊಳಿಸುವ ಸಾಧನವಾಗಿದೆ ಎಂದು ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಹೇಳಿದರು.
ನೃತ್ಯ ಕಲಾವಿದ ಮಕ್ಕಳಿಗೆ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್‌ನ ಕಾರ್ಯ ಅಭಿನಂದನೀಯ ಎಂದರು.
ಪರಿಷತ್ ಅಧ್ಯಕ್ಷೆ ವಿದುಷಿ ರಾಜಶ್ರೀ ಉಳ್ಳಾಲ್ ಪ್ರಸ್ತುತ ಪರಿಷತ್ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಉಪಾಧ್ಯಕ್ಷ ವಿದ್ವಾನ್ ಚಂದ್ರಶೇಖರ ನಾವಡ, ಕಾರ್ಯದರ್ಶಿ ವಿದುಷಿ ಶಾರದಾಮಣಿ ಶೇಖರ್, ನಿಕಟಪೂರ್ವ ಅಧ್ಯಕ್ಷ ವಿದ್ವಾನ್ ಯು.ಕೆ.ಪ್ರವೀಣ್, ಕೋಶಾಧಿಕಾರಿ ವಿದ್ವಾನ್ ಸುರೇಶ್ ಅತ್ತಾವರ್ ಮತ್ತಿತರರು ಇದ್ದರು.ಗುರು ಶ್ರೀಧರ ಹೊಳ್ಳ ಸ್ವಾಗತಿಸಿ, ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶಿರಸಿಯ ಪ್ರಸಿದ್ಧ ನೃತ್ಯ ಕಲಾವಿದೆ ಡಾ.ಸಹನಾ ಭಟ್ ಕಾರ್ಯಾಗಾರ ನಡೆಸಿಕೊಟ್ಟರು. ಮಂಗಳೂರಿನ ಸುಮಾರು 130 ಕ್ಕೂ ನೃತ್ಯ ಕಲಾವಿದರು ಭಾಗವಹಿಸಿದ್ದರು.