ಮಂಗಳೂರು ಎಂಸಿಸಿ ಬ್ಯಾಂಕ್‌ನಿಂದ ನೋಟ್ ಪುಸ್ತಕ, ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ

KannadaprabhaNewsNetwork |  
Published : Jun 28, 2025, 12:18 AM IST
ಎಂಸಿಸಿ ಬ್ಯಾಂಕ್‌ನಿಂದ ನೋಟ್‌ ಪುಸ್ತಕ, ಕೊಡೆ ವಿತರಣೆ | Kannada Prabha

ಸಾರಾಂಶ

ಮಂಗಳೂರಿನ ಎಂಸಿಸಿ ಬ್ಯಾಂಕ್ ೨೦೨೫ ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಕನ್ನಡಪ್ರಭ ವಾರ್ತೆ ಮಂಗಳೂರುಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ ಎಂಸಿಸಿ ಬ್ಯಾಂಕ್ ೨೦೨೫ ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ನಡೆಯುತ್ತಿರುವ ಈ ಚಟುವಟಿಕೆಗಳು, ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸಲು ಮತ್ತು ಶೈಕ್ಷಣಿಕ ಸಬಲೀಕರಣವನ್ನು ಉತ್ತೇಜಿಸಲು ಬ್ಯಾಂಕಿನ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತವೆ.ಪಡುಕೋಣೆಯ ಸೈಂಟ್ ಆ್ಯಂಟನಿ ಪ್ರಾಥಮಿಕ ಶಾಲೆ, ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ, ಕುಂದಾಪುರದ ಸೈಂಟ್ ಮೇರಿ ಶಾಲೆ, ಕುಂದಾಪುರದ ಸೈಂಟ್ ಜೋಸೆಫ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ಬ್ರಹ್ಮಾವರದ ನಿರ್ಮಲಾ ಪ್ರೌಢಶಾಲೆ ಮತ್ತು ಕೊಸ್ಮೊಪೊಲಿಟನ್ ಹಿರಿಯ ಪ್ರಾಥಮಿಕ ಶಾಲೆ, ಮಂಗಳೂರಿನ ಕೂಳೂರು ಪ್ರೌಢಶಾಲೆ, ಬಿಜೈಯ ಸೈಂಟ್ ಅಂಜೆಲಾ ಹೋಂ, ಡಿಮರ್ಸಿಡ್ ಅನಾಥಾಶ್ರಮ, ಪಾನೀರ್, ಪಾಲಡ್ಕದ ಸೈಂಟ್ ಇಗ್ನೇಷಿಯಸ್ ಲೊಯೊಲಾ ಶಾಲೆ, ಜೆಪ್ಪುವಿನ ಸೈಂಟ್ ರೀಟಾ ಹಿರಿಯ ಪ್ರಾಥಮಿಕ ಶಾಲೆ, ಉರ್ವದ ಲೇಡಿಹಿಲ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪುತ್ತೂರಿನ ಮಾಯಿದೆ ದೆವೂಸ್‌ ಹಿರಿಯ ಪ್ರಾಥಮಿಕ ಶಾಲೆಯ ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಶಾಲಾ ಬ್ಯಾಗ್ ಮತ್ತು ಕೊಡೆಗಳನ್ನು ವಿತರಣೆ ಮಾಡಲಾಯಿತು. ಜೆಪ್ಪುವಿನ ಸಂತ ಅಂತೋನಿ ಆಶ್ರಮದ ನಿವಾಸಿಗಳಿಗೆ ಕೊಡೆಗಳನ್ನು ವಿತರಿಸಲಾಯಿತು. ಸುಮಾರು ೧೦ ಲಕ್ಷಕ್ಕಿಂತ ಹೆಚ್ಚಿನ ವೆಚ್ಚದ ಕೊಡೆಗಳು, ಶಾಲಾ ಬ್ಯಾಗ್, ಮತ್ತು ನೋಟ್‌ಬುಕ್‌ಗಳ ವಿತರಣೆಯು ಅನೇಕ ವಿದ್ಯಾಸಂಸ್ಥೆಗಳಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯವಾದ ಬೆಂಬಲವನ್ನು ನೀಡುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ, ವಿದ್ಯಾರ್ಥಿಗಳು ಬ್ಯಾಂಕಿನ ಬೆಂಬಲವನ್ನು ನೆನಪಿಸಿಕೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳು ಬೆಳೆದು ಸಾಮಾಜಿಕ ಸ್ಥಾನಮಾನವನ್ನು ಸಾಧಿಸಿದಾಗ ಸಾಮಾಜಿಕವಾಗಿ ಹಿಂದುಳಿದವರ ಬಗ್ಗೆ ಸಹಾನುಭೂತಿ ಹೊಂದಬೇಕೆಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಿರ್ದೇಶಕರಾದ ಡಾ. ಜೆರಾಲ್ಡ್ ಪಿಂಟೊ, ಎಲ್‌ರೊಯ್ ಕಿರಣ್ ಕ್ರಾಸ್ಟೊ, ಸುಶಾಂತ್ ಸಲ್ಡಾನಾ, ಶರ್ಮಿಳಾ ಮಿನೇಜಸ್, ಐರಿನ್ ರೆಬೆಲ್ಲೊ, ರೋಶನ್ ಡಿಸೋಜಾ, ಹೆರಾಲ್ಡ್ ಜೆ. ಮಾಂತೆರೊ, ಜೆ.ಪಿ. ರೋಡ್ರಿಗಸ್, ಅಂಡ್ರ್ಯೂ ಡಿಸೋಜಾ ಮತ್ತು ಕುಂದಾಪುರ, ಬ್ರಹ್ಮಾವರ, ಅಶೋಕನಗರ, ಕಂಕನಾಡಿ, ಮಾರ್ಗನ್ಸ್‌ಗೇಟ್, ಪುತ್ತೂರು ಮತ್ತು ಉಳ್ಳಾಲ ಶಾಖೆಗಳ ಶಾಖಾ ವ್ಯವಸ್ಥಾಪಕ ಕೂಡ ಭಾಗವಹಿಸಿದ್ದರು.

PREV

Latest Stories

ಏಕರೂಪ ಸಿನಿಮಾ ಟಿಕೆಟ್‌ ದರಕ್ಕೆ ಕರಡು- ಗರಿಷ್ಠ ಟಿಕೆಟ್‌ ದರ ₹200 ನಿಗದಿ
ಶಾಲೆಯಲ್ಲಿನ ಕಲುಷಿತ ಬಿಸಿಯೂಟ ಸೇವಿಸಿ 68 ವಿದ್ಯಾರ್ಥಿಗಳು ಅಸ್ವಸ್ಥ
ರಾಷ್ಟ್ರೀಯ ಲೋಕ ಅದಾಲತ್: 58.67 ಲಕ್ಷ ಕೇಸ್ ಇತ್ಯರ್ಥ