ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ವಿರುದ್ಧ ಶಾಸಕ ಆಕ್ರೋಶ

KannadaprabhaNewsNetwork |  
Published : Mar 03, 2026, 02:30 AM IST
ಶಾಸಕ ವೇದವ್ಯಾಸ್‌ ಕಾಮತ್‌  | Kannada Prabha

ಸಾರಾಂಶ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ರೋಗಿಗಳನ್ನು ಪರದಾಡುವ ಸ್ಥಿತಿಗೆ ತಂದಿಟ್ಟ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತೊಮ್ಮೆ ಬಟಾಬಯಲಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ರೋಗಿಗಳನ್ನು ಪರದಾಡುವ ಸ್ಥಿತಿಗೆ ತಂದಿಟ್ಟ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತೊಮ್ಮೆ ಬಟಾಬಯಲಾಗಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಔಷಧಗಳ ಕೃತಕ ಕೊರತೆ ಸೃಷ್ಟಿಸಿ ಬಡ ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಡ ಜನರ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲವಾಗಿದೆ. ನಮ್ಮ ಜಿಲ್ಲೆಯಲ್ಲಿಯೂ ಅನೇಕರು ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳುತ್ತಿದ್ದು ಸ್ಪಂದನೆ ನೀಡಬೇಕಾಗಿದ್ದ ಆರೋಗ್ಯ ಇಲಾಖೆ ಕಣ್ಣು ಮುಚ್ಚಿ ಕೂತಿರುವುದು ಬೇಜವಾಬ್ದಾರಿಯ ಪರಮಾವಧಿ. ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರೇ ಸ್ವತಃ ಆರೋಗ್ಯ ಸಚಿವರಾಗಿದ್ದರೂ ಕೂಡಾ ಜಿಲ್ಲೆಯ ಜನತೆಗೆ ಆರೋಗ್ಯ ಭಾಗ್ಯವಿಲ್ಲದಿರುವುದು ನಮ್ಮ ದೌರ್ಭಾಗ್ಯ. ಇಂತಹ ರೋಗಪೀಡಿತ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದ ಜನತೆಯೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.ಕಾಂಗ್ರೆಸ್ ಸರ್ಕಾರದ ಮೇಲೆ ಜನತೆಗೆ ನಂಬಿಕೆಯೇ ಇಲ್ಲವಾಗಿದೆ ಎಂದು ಶಾಸಕರು ಪತ್ರಿಕಾ ಹೇಳಿಕೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಖುಮೇನಿಗೆ ಸಿಎಂ ಶ್ರದ್ಧಾಂಜಲಿ ದೇಶಕ್ಕೆ ಅವಮಾನ: ಸುನಿಲ್ ಕುಮಾರ್
ವಿದ್ಯಾಪೋಷಕ್ ಶಿಬಿರದಲ್ಲಿ ಸಾಹಿತಿ ನೇಮಿಚಂದ್ರ ಮಾನವೀಯತೆ