ಅಂಚೆ ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಳ್ಳಿ: ಲೋಕನಾಥ್

KannadaprabhaNewsNetwork |  
Published : Nov 04, 2026, 01:45 AM IST
ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ಅಂಚೆ ಇಲಾಖೆಯಿಂದ ನೂತನವಾಗಿ ವಿವಿಧ ಸೇವಾ ಸೌಲಭ್ಯಗಳು ಗ್ರಾಹಕರಿಗೆ ಲಭ್ಯವಿರುತ್ತದೆ. ಅದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಭಾರತೀಯ ಅಂಚೆ ಇಲಾಖೆಯ ಪಾಂಡೇಶ್ವರ ಕೇಂದ್ರದ ಹಿರಿಯ ಅಧಿಕಾರಿ ಲೋಕನಾಥ್ ಕರೆ

ಮಂಗಳೂರು: ಅಂಚೆ ಇಲಾಖೆಯಿಂದ ನೂತನವಾಗಿ ವಿವಿಧ ಸೇವಾ ಸೌಲಭ್ಯಗಳು ಗ್ರಾಹಕರಿಗೆ ಲಭ್ಯವಿರುತ್ತದೆ. ಅದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಭಾರತೀಯ ಅಂಚೆ ಇಲಾಖೆಯ ಪಾಂಡೇಶ್ವರ ಕೇಂದ್ರದ ಹಿರಿಯ ಅಧಿಕಾರಿ ಲೋಕನಾಥ್ ಕರೆ ನೀಡಿದರು.

ಅವರು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ಹಾಗೂ ಭಾರತೀಯ ಅಂಚೆ ಇಲಾಖೆಯ ಸಹಭಾಗಿತ್ವದಲ್ಲಿ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ವಿಮಾ ಯೋಜನೆಯ ನೋಂದಣಿ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಅಂಚೆ ಇಲಾಖೆಯ ಮೂಲಕ ಆಧಾರ್ ನೋಂದಣಿ, ತಿದ್ದುಪಡಿ, ವಿಮಾ ಯೋಜನೆಗಳು ವಿವಿಧ ಆರೋಗ್ಯ ವಿಮಾ ಯೋಜನೆಗಳು ಲಭ್ಯವಿರುತ್ತವೆ. ಕಡಿಮೆ ಮೊತ್ತದಲ್ಲಿ ಕನಿಷ್ಠ ದಾಖಲೆಗಳೊಂದಿಗೆ ಹೆಚ್ಚು ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರು.ವರೆಗಿನ ಅಪಘಾತ ವಿಮಾ ಯೋಜನೆ ಉಪಯುಕ್ತ ಯೋಜನೆಯಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಅಧ್ಯಕ್ಷತೆ ವಹಿಸಿದ್ದರು.

ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಜಿಲ್ಲಾ ಸಂಘದ ಪೂರ್ವಾಧ್ಯಕ್ಷ ಹರ್ಷ, ಭಾರತೀಯ ಅಂಚೆ ಇಲಾಖೆಯ ಪಾಂಡೇಶ್ವರ ಕೇಂದ್ರದ ನಿರೀಕ್ಷಕ ಪ್ರದೀಪ್ ಭಂಡಾರಿ ಇದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ವಂದಿಸಿದರು.

----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾವೇರಿ ನೀರಾವರಿ ನಿಗಮದ ಕಚೇರಿಗೆ ರೈತರಿಂದ ಮುತ್ತಿಗೆ, ಪ್ರತಿಭಟನೆ
ಮಹಾಕಾವ್ಯಗಳ ಮೌಲ್ಯ ಮಕ್ಕಳಿಗೆ ತಿಳಿಸಿ