ಮೈಮುನಾ- ಮರ್ಝಿನಾಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Mar 11, 2024, 01:20 AM IST
ಕನ್ನಡಪ್ರಭ ಮಂಗಳೂರು ಬ್ಯೂರೊ ಮುಖ್ಯಸ್ಥ ರಾಘವೇಂದ್ರ ಅಗ್ನಿಹೋತ್ರಿ ಸೇರಿದಂತೆ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಕಾರ್ಯಕ್ರಮ ಉದ್ಘಾಟಿಸಿದ ನಟ- ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ಸಮಾಜದಲ್ಲಿ ಮಾಧ್ಯಮ ರಂಗ ಮಹತ್ವದ ಸ್ಥಾನ ಪಡೆದಿದೆ. ಗುರು ಹಿರಿಯರನ್ನು ಗೌರವಿಸಿದರೆ ಮಾತ್ರ ಸಾಧನೆಯ ಹಾದಿಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಸಮಾಜಕ್ಕೆ ಪ್ರೇರಣೆ ನೀಡಿದಂತಾಗುತ್ತದೆ ಎಂದು ಶಾಸಕ ಡಾ.ವೈ. ಭರತ್ ಶೆಟ್ಟಿ ಹೇಳಿದ್ದಾರೆ.

ಮರವೂರಿನ ‘ದಿ ಗ್ರ್ಯಾಂಡ್ ಬೇ’ಯಲ್ಲಿ ಭಾನುವಾರ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ ಕಾರ್ಯಕ್ರಮದಲ್ಲಿ ಹೈನುಗಾರಿಕೆಯಲ್ಲಿ ಸಾಧನೆ ಮಾಡಿರುವ ಹರೇಕಳದ ಮೈಮುನಾ ಮತ್ತು ಮರ್ಝಿನಾ ಅವರಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ನಟ- ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ಸಮಾಜದಲ್ಲಿ ಮಾಧ್ಯಮ ರಂಗ ಮಹತ್ವದ ಸ್ಥಾನ ಪಡೆದಿದೆ. ಗುರು ಹಿರಿಯರನ್ನು ಗೌರವಿಸಿದರೆ ಮಾತ್ರ ಸಾಧನೆಯ ಹಾದಿಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು.ಹಿರಿಯ ಪತ್ರಕರ್ತರಿಗೆ ಸನ್ಮಾನ: ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಹಿರಿಯ ಪತ್ರಕರ್ತರಾದ ‘ಕನ್ನಡಪ್ರಭ’ದ ಮಂಗಳೂರು ಬ್ಯೂರೊ ಮುಖ್ಯಸ್ಥ ರಾಘವೇಂದ್ರ ಅಗ್ನಿಹೋತ್ರಿ, ಅನ್ನು ಮಂಗಳೂರು, ರವಿ ಪೊಸವಣಿಕೆ, ಪ್ರಕಾಶ್ ಮಂಜೇಶ್ವರ, ಕೃಷ್ಣ ಕೋಲ್ಚಾರ್, ರಾಜೇಶ್ ಕಿಣಿ, ಅಶೋಕ್ ಶೆಟ್ಟಿ ಬಿ.ಎನ್., ರವೀಂದ್ರ ಶೆಟ್ಟಿ ಕುತ್ತೆತ್ತೂರು, ಶರತ್ ಸಾಲ್ಯಾನ್ ಅವರಿಗೆ ಪ್ರೆಸ್ ಕ್ಲಬ್ ಗೌರವ ಪ್ರದಾನ ಮಾಡಲಾಯಿತು. ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.ಪ್ರೆಸ್ ಕ್ಲಬ್ ಪ್ರಶಸ್ತಿ ತೀರ್ಪುಗಾರರಾದ ಎಸ್‌ಡಿಎಂ ಕಾಲೇಜಿನ ಉಪನ್ಯಾಸಕ ಪುಷ್ಪರಾಜ್ ಮತ್ತು ವಿಶ್ರಾಂತ ಪತ್ರಕರ್ತ ಕುಮಾರನಾಥ್ ಅವರನ್ನು ಗೌರವಿಸಲಾಯಿತು. ಪ್ರೆಸ್ ಕ್ಲಬ್ ಸಿಬ್ಬಂದಿ ಚಂಚಲಾಕ್ಷಿ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.ಮತದಾನದ ಪ್ರತಿಜ್ಞಾ ವಿಧಿಯನ್ನು ಹರೀಶ್ ಮೋಟುಕಾನ ನೆರವೇರಿಸಿದರು. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ಮಾಜಿ ಮೇಯರ್‌ಗಳಾದ ಶಶಿಧರ್ ಹೆಗ್ಡೆ, ಭಾಸ್ಕರ ಕೆ., ಹಿರಿಯ ಕಾರ್ಪೊರೇಟರ್‌ ನವೀನ್ ಡಿಸೋಜ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಕಾರ್ಯನಿರತ ಪತ್ರ ಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್‌ಕ್ಲಬ್ ಪೂರ್ವಾಧ್ಯಕ್ಷ ಅನ್ನು ಮಂಗಳೂರು, ಹಿರಿಯ ಪತ್ರಕರ್ತರಾದ ಬಿ.ರವೀಂದ್ರ ಶೆಟ್ಟಿ, ವಾಲ್ಟರ್ ನಂದಳಿಕೆ ಇದ್ದರು. ಸತೀಶ್ ಇರಾ ಪ್ರಾರ್ಥಿಸಿದರು. ಮಹಮ್ಮದ್ ಆರಿಫ್ ಪಡುಬಿದ್ರಿ, ಆರ್.ಸಿ.ಭಟ್ ಮತ್ತು ಆತ್ಮಭೂಷಣ್ ಭಟ್ ಸನ್ಮಾನಿತರನ್ನು ಪರಿಚಯಿಸಿದರು.ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್. ನಿರೂಪಿಸಿದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''