ಬಿಜೆಪಿ ಮುಖಂಡ ರಾಮಚಂದರ್‌ ಬೈಕಂಪಾಡಿ ನಿಧನ

KannadaprabhaNewsNetwork |  
Published : Apr 15, 2026, 02:45 AM IST
ರಾಮಚಂದರ್ ಬೈಕಂಪಾಡಿ  | Kannada Prabha

ಸಾರಾಂಶ

ಬಿಜೆಪಿ ಹಿರಿಯ ಮುಖಂಡ, ಮೊಗವೀರ ಸಮುದಾಯದ ಮುಂದಾಳು ರಾಮಚಂದರ್‌ ಬೈಕಂಪಾಡಿ(75) ಮಂಗಳವಾರ ನಿಧನರಾದರು.

ಮಂಗಳೂರು: ಬಿಜೆಪಿ ಹಿರಿಯ ಮುಖಂಡ, ಮೊಗವೀರ ಸಮುದಾಯದ ಮುಂದಾಳು ರಾಮಚಂದರ್‌ ಬೈಕಂಪಾಡಿ(75) ಮಂಗಳವಾರ ನಿಧನರಾದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ನಿಕಟಪೂರ್ವ ಸದಸ್ಯರಾಗಿದ್ದ ಅವರು ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ(ಕೆಎಫ್‌ಡಿಸಿ) ಇದರ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಆರಂಭದಲ್ಲಿ ನಾಟಕಕಾರರಾಗಿ ಜನ ಮನ ಗೆದ್ದಿದ್ದ ರಾಮಚಂದರ್‌ ಬೈಕಂಪಾಡಿ ಅವರು ಸಾಮಾಜಿಕ ಹೋರಾಟಗಾರರಾಗಿಯೂ ಗುರುತಿಸಿಕೊಂಡಿದ್ದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ನಿಕಟವರ್ತಿಯಾಗಿದ್ದ ಅವರು, 2013ರಲ್ಲಿ ಬಿಎಸ್‌ವೈಯವರ ಸ್ವತಂತ್ರ ರಾಜಕೀಯ ಪಕ್ಷ ಕೆಜೆಪಿ ಸೇರ್ಪಡೆಯಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು. ಬಳಿಕ ಮತ್ತೆ ಮಾತೃ ಪಕ್ಷ ಬಿಜೆಪಿಗೆ ಮರಳಿದ್ದರು.ಅವರಿಗೆ ಕರ್ನಾಟಕ ಸರ್ಕಾರದಿಂದ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳು ದೊರಕಿವೆ.

ಗಣ್ಯರ ಸಂತಾಪ: ಇವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಪ್ರತಾಪಸಿಂಹ ನಾಯಕ್, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್‌, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್, ಮಾಜಿ ಸಚಿವರಾದ ಕೃಷ್ಣ ಜೆ. ಪಾಲೇಮಾರ್, ನಾಗರಾಜ್ ಶೆಟ್ಟಿ. ಎಸ್. ಅಂಗಾರ, ಮಾಜಿ ಶಾಸಕರಾದ ಎನ್. ಯೋಗೀಶ್ ಭಟ್, ಕ್ಯಾ. ಗಣೇಶ್ ಕಾರ್ಣಿಕ್, ಕೆ. ಮೋನಪ್ಪ ಭಂಡಾರಿ, ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಮುಖಂಡರಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ನಿತಿನ್ ಕುಮಾರ್ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

----------------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಂಡ, ಸೋಮೆಯಂಡ, ಕೊಂಗೆಟೀರ ಭರ್ಜರಿ ಜಯಬೇರಿ
ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸೋಣ: ಜಗದೀಶ್ ಆಚಾರ್ಯ ಕಪ್ಪೆಟ್ಟು