‘ಸಹಕಾರಿ ಪಿತಾಮಹ’ ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಜುಲೈ 4 ರಂದು ಸಂಜೆ 3.00 ಗಂಟೆಗೆ ನಡೆಯಲಿದೆ.2025-2026ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 10ನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ ವಿತರಣೆ ಈ ಸಮಾರಂಭದಲ್ಲಿ ನಡೆಯಲಿದೆ.
ಮಂಗಳೂರು: ‘ಸಹಕಾರಿ ಪಿತಾಮಹ’ ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಜುಲೈ 4 ರಂದು ಸಂಜೆ 3.00 ಗಂಟೆಗೆ ನಡೆಯಲಿದೆ.2025-2026ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 10ನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿ ವೇತನ ವಿತರಣೆ ಈ ಸಮಾರಂಭದಲ್ಲಿ ನಡೆಯಲಿದೆ.
ಮಾಜಿ ಸಚಿವ ಹಾಗೂ ವಿಕಾಸ್ ಎಜ್ಯುಕೇಶನ್ ಟ್ರಸ್ಟ್ ಸಂಸ್ಥಾಪಕ ಕೃಷ್ಣ ಜೆ.ಪಾಲೇಮಾರ್ ಇವರು ಗೌರವ ಪುರಸ್ಕಾರ ಹಾಗೂ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ, ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸಲಿರುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.