ವಿದ್ಯಾರ್ಥಿ ಜೀವನದಲ್ಲಿ ಸಮಯ ಪರಿಪಾಲನೆಗೆ ಮಹತ್ವ: ಪ್ರೊ. ಹರೀಶ್ ಆಚಾರ್ಯ

KannadaprabhaNewsNetwork |  
Published : Apr 16, 2026, 02:45 AM IST
ಕಟೀಲು ಕಾಲೇಜು ವಾರ್ಷಿಕೋತ್ಸವ | Kannada Prabha

ಸಾರಾಂಶ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರಗಿದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಮೂಲ್ಕಿ: ವಿದ್ಯಾರ್ಥಿ ಜೀವನದಲ್ಲಿ ಸಮಯ ವ್ಯರ್ಥ ಮಾಡದೇ ಪ್ರಾಮಾಣಿಕ ಪ್ರಯತ್ನ ಮಾಡಿದಲ್ಲಿ ಜೀವನದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯವೆಂದು ಸುರತ್ಕಲ್‌ ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಹರೀಶ್ ಆಚಾರ್ಯ ಹೇಳಿದರು.ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರಗಿದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿಯವರು ಕಾಲೇಜಿಗೆ ಕೊಡುಗೆಯಾಗಿ ನೀಡಿದ ಹುಲ್ಲು ಕತ್ತರಿಸುವ ಯಂತ್ರವನ್ನು ಆಡಳಿತ ಮಂಡಳಿಯ ಪರವಾಗಿ ಕಟೀಲು ದೇವಳದ ಅನುವಂಶಿಕ ಅರ್ಚಕರಾದ ಸದಾನಂದ ಆಸ್ರಣ್ಣ ಸ್ವೀಕರಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ವೃಂದಾ ಶಶಿಧರ್ ಹೆಗ್ಡೆ, ಪ್ರಾಂಶುಪಾಲ ಡಾ. ವಿಜಯ್ ವಿ., ಶಿಕ್ಷಕ ಪ್ರತಿನಿಧಿ ಡಾ. ಪದ್ಮನಾಭ ಮರಾಠೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಅಶ್ವಿತಾ ವಿ. ಶೆಟ್ಟಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾರ್ತಿಕ್ ಎಸ್. ನಾಯ್ಕ್, ಉಪಾಧ್ಯಕ್ಷ ತರುಣ್ ಡಿ.ದೇವಾಡಿಗ, ಕಾರ್ಯದರ್ಶಿ ಕೃಪಾ ಟಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರಾರ್ಥನಾ ಉಪಸ್ಥಿತರಿದ್ದರು. ಉಪನ್ಯಾಸಕಿ ಪೂಜಾ ಕಾಂಚನ್ ಸ್ವಾಗತಿಸಿದರು. ಗ್ರಂಥಪಾಲಕಿ ಸುಮಿತ್ರಾ ವಂದಿಸಿದರು. ಪ್ರಜ್ಞಾ ಭಂಡಾರಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕರಾಯ ದೇವಳಕ್ಕೆ ನೂತನ ಬ್ರಹ್ಮರಥ ಪುರಪ್ರವೇಶ
11 ಕೋಟಿ ರು. ವೆಚ್ಚದಲ್ಲಿ ಕೈಗಾರಿಕಾ ಪ್ರದೇಶ ಹೆದ್ದಾರಿ ಸಂಪರ್ಕ ರಸ್ತೆ ಅಭಿವೃದ್ಧಿ