ಮಂಗಳೂರು ವಿವಿ ಅಂತರ್‌ಕಾಲೇಜು ಅಥ್ಲೆಟಿಕ್ಸ್ ಕೂಟ ಸಂಪನ್ನ

KannadaprabhaNewsNetwork |  
Published : Nov 30, 2024, 12:48 AM IST
29ಅತ್ಲೆಟಿಕ್ಸ್ | Kannada Prabha

ಸಾರಾಂಶ

ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಉಡುಪಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್‌ ಕ್ಲಬ್ ಅಮೃತ್ ಮತ್ತು ಲಿಯೋ ಡಿಸ್ಟ್ರಿಕ್ಟ್ ೩೧೭ಸಿ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿವಿ ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್‌ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಉಡುಪಿ

ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಉಡುಪಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್‌ ಕ್ಲಬ್ ಅಮೃತ್ ಮತ್ತು ಲಿಯೋ ಡಿಸ್ಟ್ರಿಕ್ಟ್ ೩೧೭ಸಿ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿವಿ ಮಟ್ಟದ ಪುರುಷರ ಮತ್ತು ಮಹಿಳೆಯರ ಅಂತರ್‌ಕಾಲೇಜು ಅತ್ಲೆಟಿಕ್ಸ್ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.ಕ್ರೀಡಾಕೂಟವನ್ನು ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಉದ್ಘಾಟಿಸಿ, ಕ್ರೀಡೆ ನಮ್ಮ ದೈಹಿಕ ಕ್ಷಮತೆಯ ಜೊತೆಗೆ ಮನೋಬಲವನ್ನು ಹೆಚ್ಚಿಸುತ್ತದೆ. ಯುವಜನತೆ ಕ್ರೀಡೆಯಲ್ಲಿ ತೊಡಗಿಸಿಕೊಂಡು ಸಕಾರಾತ್ಮಕವಾಗಿ ಬೆಳೆದಾಗ ಸಂಸ್ಥೆಗೂ ಸಮಜಕ್ಕೂ ಶ್ರೇಯಸ್ಸು ಎಂದರು.ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಅಥ್ಲೆಟಿಕ್ ಫೆಡರೇಶನ್ ಅಧ್ಯಕ್ಷ ಹರಿಪ್ರಸಾದ್‌ ರೈ ಕ್ರೀಡಾಕೂಟಕ್ಕೆ ಶುಭ ಹಾರೈಸುತ್ತಾ ಕ್ರೀಡಾ ಮನೋಭಾವನೆಯಿಂದ ಸ್ಪರ್ಧಿಸುವಂತೆ ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಉದ್ಯಮಿ ಆನಂದ ಸುವರ್ಣ, ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ, ಉಪನ್ಯಾಸಕ ಡಾ. ಕೆ. ರಾಮಚಂದ್ರ, ಕಾಲೇಜಿನ ಶೈಕ್ಷಣಿಕ ಸಲಹೆಗಾರ ಡಾ. ಶ್ರೀಧರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.ಕ್ರೀಡಾಕೂಟ ಆಯೋಜಕ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆಯ ಡಾ. ರೋಶನ್‌ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪದವಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಶಾಂತ ಎನ್. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!