ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡ, ಸೆಮಿಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ತಂಡವನ್ನು ಸೋಲಿಸಿ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ತಂಡವನ್ನು ಸೋಲಿಸಿ ಟ್ರೋಫಿ ಗೆದ್ದಿತು.ಮಹಿಳಾ ತಂಡವು ಸೆಮಿಫೈನಲ್‌ನಲ್ಲಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜು ಅಜ್ಜರಕಾಡು ತಂಡವನ್ನು ಪರಾಭವಗೊಳಿಸಿ, ಫೈನಲ್ ಪ್ರವೇಶಿಸಿತು. ಫೈನಲ್‌ನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.