ಯಕ್ಷಾಂಗಣ ತಾಳಮದ್ದಳೆ ಸಪ್ತಾಹ: ದಿ.ಎ.ಕೆ.ನಾರಾಯಣ ಶೆಟ್ಟಿ, ಮಹಾಬಲ ಶೆಟ್ಟಿ ಸಂಸ್ಮರಣೆ

KannadaprabhaNewsNetwork |  
Published : Nov 26, 2026, 02:45 AM IST
ಯಕ್ಷಾಂಗಣ ತಾಳಮದ್ದಳೆ ಸಪ್ತಾಹದಲ್ಲಿ ದಿ.ಎ.ಕೆ.ನಾರಾಯಣ ಶೆಟ್ಟಿ, ಮಹಾಬಲ ಶೆಟ್ಟಿ ಸಂಸ್ಮರಣೆ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ಮಂಗಳೂರು ವಿ.ವಿ.ಕಾಲೇಜಿನಲ್ಲಿ ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆ, ಮಂಗಳೂರು ವಿ.ವಿ.ಯ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಸಹಯೋಗದಲ್ಲಿ ನಗರದ ವಿವಿ ಕಾಲೇಜು ರವೀಂದ್ರ ಕಲಾಭವನದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ-2026’ 14ನೇ ವರ್ಷದ ನುಡಿಹಬ್ಬ ಚತುರ್ದಶ ಸರಣಿಯ ಎರಡನೇ ದಿನ ಕೀರ್ತಿಶೇಷ ಅರ್ಥಧಾರಿಗಳಾದ ದಿ.ಎ.ಕೆ.ನಾರಾಯಣ ಶೆಟ್ಟಿ ಮತ್ತು ಎ.ಕೆ.ಮಹಾಬಲ ಶೆಟ್ಟಿಫರಂಗಿಪೇಟೆ ಅವರ ನೆನಪಿನ ಕಾರ್ಯಕ್ರಮ ಸೋಮವಾರ ನಡೆಯಿತು.

ಮಂಗಳೂರು: ಮಂಗಳೂರು ವಿ.ವಿ.ಕಾಲೇಜಿನಲ್ಲಿ ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆ, ಮಂಗಳೂರು ವಿ.ವಿ.ಯ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಸಹಯೋಗದಲ್ಲಿ ನಗರದ ವಿವಿ ಕಾಲೇಜು ರವೀಂದ್ರ ಕಲಾಭವನದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ-2026’ 14ನೇ ವರ್ಷದ ನುಡಿಹಬ್ಬ ಚತುರ್ದಶ ಸರಣಿಯ ಎರಡನೇ ದಿನ ಕೀರ್ತಿಶೇಷ ಅರ್ಥಧಾರಿಗಳಾದ ದಿ.ಎ.ಕೆ.ನಾರಾಯಣ ಶೆಟ್ಟಿ ಮತ್ತು ಎ.ಕೆ.ಮಹಾಬಲ ಶೆಟ್ಟಿಫರಂಗಿಪೇಟೆ ಅವರ ನೆನಪಿನ ಕಾರ್ಯಕ್ರಮ ಸೋಮವಾರ ನಡೆಯಿತು.

ಸಂಸ್ಮರಣಾ ಜ್ಯೋತಿ ಬೆಳಗಿ ಮಾತನಾಡಿದ ಮಂಗಳೂರು ಸ್ಮಾರ್ಟ್ ಸಿಟಿಯ ಮಹಾಪ್ರಬಂಧಕ ಅರುಣಪ್ರಭ ಕೆ.ಎಸ್., ಹಿರಿಯ ತಲೆಮಾರಿನಲ್ಲಿ ಆಗಿಹೋದ ಕಲಾವಿದರು ಇಂದಿನವರಿಗೆ ಮಾರ್ಗದರ್ಶಕರು. ಅದರಲ್ಲೂ ಯಕ್ಷರಂಗದಲ್ಲಿ ಮೆರೆದು ಕಣ್ಮರೆಯಾದವರು ಕೀರ್ತಿಶೇಷರಾಗಿ ನಮ್ಮ ನೆನಪಲ್ಲಿ ಉಳಿಯುತ್ತಾರೆ. ಅಂತಹ ಹಿರಿಯ ಸಾಧಕರ ಬದುಕು ಸಾರ್ಥಕ ಎಂದರು.

ನೆನಪು ಸಮಿತಿ ಸಂಚಾಲಕ ಮಹೇಶ್ ಮೋಟರ್ಸ್ ಮಾಲಕ ಎ.ಕೆ.ಜಯರಾಮ ಶೇಖ ಅಧ್ಯಕ್ಷತೆ ವಹಿಸಿದ್ದರು. ಸಂಜ್ಯೋತಿ ಶೇಖ ಸಂಸ್ಮರಣಾ ಭಾಷಣ ಮಾಡಿದರು. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಂಜುನಾಥ ಎಸ್.ರೇವಣ್ಕರ್, ಜಿಲ್ಲಾ ಬಸ್ ಮಾಲೀಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ, ಪ್ರಮುಖರಾದ ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ, ಜಗದೀಶ ಪೂಜಾರಿ ಇರಾ ಆಚೆಬೈಲು, ಸಿದ್ಧಾರ್ಥ ಅಜ್ರಿ, ಸುಮಾ ಪ್ರಸಾದ್ ಮತ್ತಿತರರು ಇದ್ದರು.

ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಕಾರ್ಯದರ್ಶಿ ಲಕ್ಷ್ಮೀನಾರಾಯಣ ರೈ ಹರೇಕಳ ವಂದಿಸಿದರು. ಪ್ರಧಾನ ಸಂಚಾಲಕ ರವೀಂದ್ರ ರೈ ಕಲ್ಲಿಮಾರು ನಿರೂಪಿಸಿದರು.

ಸಪ್ತಾಹದ ಎರಡನೇ ದಿನದ ಕಾರ್ಯಕ್ರಮವಾಗಿ ಕದ್ರಿ ಹವ್ಯಾಸಿ ಬಳಗದ ಶರತ್ ಕುಮಾರ್ ಕದ್ರಿ ಸಂಯೋಜನೆಯಲ್ಲಿ ‘ರಾಜಾ ಸೌದಾಸ’ ಯಕ್ಷಗಾನ ತಾಳಮದ್ದಳೆ ನಡೆಯಿತು.

----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಳಕಲ್ಲಿಗೆ ಬಂತು ಕನ್ನಡ ಬಂಡಾರದ ರಥ
ಅಧಿವೇಶನ ಸಿದ್ಧತೆ ಹೆಸರಿನಲ್ಲಿ ಹಣ ದುರ್ಬಳಕೆ?