ಮಂಗಳೂರು: ನಾಳೆ ‘ಸ್ಟಾರ್ಟ್‌ಅಪ್ ಸಮಾವೇಶ’

KannadaprabhaNewsNetwork |  
Published : Aug 20, 2026, 02:30 AM IST
 ಸಿಎ ಎಸ್.ಎಸ್. ನಾಯಕ್  ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಕರಾವಳಿ ಕರ್ನಾಟಕದ ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್‌ಎಂಇ) ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಉತ್ತೇಜನ ನೀಡುವ ಉದ್ದೇಶದಿಂದ ಶುಕ್ರವಾರ ಬೆಳಗ್ಗೆ ೯.೧೫ರಿಂದ ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ (ಎಂಪಿಸಿ) ರೋಟರಿ ‘ಕೋಸ್ಟಲ್ ಎಂಎಸ್‌ಎಂಇ - ಸ್ಟಾರ್ಟ್‌ಅಪ್ ಕಾಂಕ್ಲೇವ್-೨೦೨೬’ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ.

ಮಂಗಳೂರು: ಕರಾವಳಿ ಕರ್ನಾಟಕದ ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಂಎಸ್‌ಎಂಇ) ಹಾಗೂ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಉತ್ತೇಜನ ನೀಡುವ ಉದ್ದೇಶದಿಂದ ಶುಕ್ರವಾರ ಬೆಳಗ್ಗೆ ೯.೧೫ರಿಂದ ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ (ಎಂಪಿಸಿ) ರೋಟರಿ ‘ಕೋಸ್ಟಲ್ ಎಂಎಸ್‌ಎಂಇ - ಸ್ಟಾರ್ಟ್‌ಅಪ್ ಕಾಂಕ್ಲೇವ್-೨೦೨೬’ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ.ಮಂಗಳೂರಿನ ಓಲ್ಡ್ ಪೋರ್ಟ್ ರಸ್ತೆಯ ತಾಜ್ ವಿವಾಂತ ಹೋಟೆಲ್ ಎದುರಿನ ರೆಡ್‌ಕ್ರಾಸ್ ಭವನದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದೆ. ಈ ಬಾರಿಯ ಸಮಾವೇಶದಲ್ಲಿ ಪ್ರಮುಖ ಉದ್ಯಮಿಗಳು, ನವೋದ್ಯಮಿಗಳು ಸೇರಿದಂತೆ ೪೦೦ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಎಂದು ಸಮಾವೇಶದ ನಿರ್ದೇಶಕ ಸಿಎ ಎಸ್.ಎಸ್. ನಾಯಕ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ತಂತ್ರಜ್ಞಾನ ವಲಯ, ವ್ಯಾಪಾರ, ವಾಣಿಜ್ಯ, ಪ್ರವಾಸೋದ್ಯಮ, ಉತ್ಪಾದನೆ, ಸೇವಾ ವಲಯ ಮತ್ತು ಆರೋಗ್ಯ ಕ್ಷೇತ್ರದ ಪ್ರಮುಖರು, ಹೂಡಿಕೆದಾರರು, ಕೈಗಾರಿಕಾ ಮುಖಂಡರು, ನೀತಿ ನಿರೂಪಕರು ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಪಾಲುದಾರರನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.ಎಂಎಸ್‌ಎಂಇಗಳಿಗೆ ಲಭ್ಯವಿರುವ ವಿವಿಧ ಬ್ಯಾಂಕಿಂಗ್ ಸಾಲ ಸೌಲಭ್ಯಗಳು, ಸಿಬಿಲ್ ಸ್ಕೋರ್ ಸಂಬಂಧಿತ ಸಮಸ್ಯೆಗಳು ಮತ್ತು ಪರಿಹಾರಗಳು, ಕೃಷಿ ಉದ್ಯಮ, ಆಹಾರ ಸಂಸ್ಕರಣೆ ಹಾಗೂ ತಂತ್ರಜ್ಞಾನ ವಲಯಗಳಿಗೆ ಸಂಬಂಧಿಸಿದ ವಿಶೇಷ ಮಾಹಿತಿಯನ್ನು ಅಧಿವೇಶನದಲ್ಲಿ ನೀಡಲಾಗುತ್ತದೆ ಎಂದವರು ವಿವರಿಸಿದರು.ಮಂಗಳೂರು ಪ್ರೊಡಕ್ಟಿವಿಟಿ ಕೌನ್ಸಿಲ್ ಕಾರ್ಯದರ್ಶಿ ಡಾ.ಪಿ.ಜಿ. ಮಹೇಶ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ರವೀಂದ್ರ ಬಿ.ಎನ್., ಕಾರ್ಯದರ್ಶಿ ಜಾಕ್ಸನ್ ಸಲ್ದಾನ, ಕಾರ್ಯಕ್ರಮ ಸಂಯೋಜಕ ಡ್ಯಾರಿಲ್ ಡಿ’ಸೋಜಾ, ರೋಟರಿ ಕ್ಲಬ್‌ನ ಡಾ. ದೇವದಾಸ್ ರೈ, ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡಿಮೆ ಶ್ರಮ, ಅಧಿಕ ಇಳುವರಿ ಪಡೆಯಲು ವೈಜ್ಞಾನಿಕ ಕೃಷಿ ಪದ್ಧತಿ ಪೂರಕ: ಬಿ.ಪುಂಡಲೀಕ ಮರಾಠೆ
ಎಸ್‌ಡಿಎಂಎ ಕಾಲೇಜಿನಿಂದ ಸ್ತನ್ಯಪಾನ ಜಾಗೃತಿ ಬೀದಿನಾಟಕ