ಕನ್ನಡಪ್ರಭ ವಾರ್ತೆ ಮಂಗಳೂರು
ದ.ಕ.ದಲ್ಲಿ ಕೋಮು ಸಂಘರ್ಷದ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಿಎಂ ಸಲಹೆಯಂತೆ ಗುರುವಾರ ಜಿಲ್ಲೆಗೆ ಆಗಮಿಸಿದ ಅವರು ನಗರದಲ್ಲಿ ಧಾರ್ಮಿಕ ಮುಖಂಡರ ಜತೆ ಚರ್ಚಿಸಿದರು.
ಇಡೀ ರಾಜ್ಯದಲ್ಲಿ ಶೇ.90ರಷ್ಟು ಉಗ್ರವಾದ, ಕೋಮುವಾದಕ್ಕೆ ಕಡಿವಾಣ ಹಾಕಿದ್ದೇವೆ. ಆದರೆ ದ.ಕ. ಜಿಲ್ಲೆಯಲ್ಲಿ ಮಾತ್ರ ಅದು ಸಾಧ್ಯವಾಗುತ್ತಿಲ್ಲ. ಕೋಮುವಾದದ ವಿರುದ್ಧ ಕಟ್ಟುನಿಟ್ಟಾಗಿ ಕ್ರಮ ಆಗಲಿದೆ. ಇಲ್ಲಿನ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ಅವರ ಗಮನಕ್ಕೆ ತಂದಿದ್ದೇನೆ. ಬೆಂಗಳೂರಿಗೆ ಹೋಗಿ ಸಿಎಂ ಅವರ ಗಮನಕ್ಕೂ ತರುತ್ತೇನೆ ಎಂದು ತಿಳಿಸಿದರು.ಸೂತ್ರಧಾರಿಗಳು ಕಾರಣ:
ಆದಷ್ಟು ಶೀಘ್ರದಲ್ಲಿ ಎಲ್ಲ ಧರ್ಮಗಳ ಧರ್ಮಗುರುಗಳನ್ನು ಕರೆದು ಮಾತುಕತೆ ನಡೆಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಜತೆ ಮಾತನಾಡಿದ್ದೇನೆ ಎಂದರು.
ಮುಸ್ಲಿಂ ಮುಖಂಡರ ರಾಜಿನಾಮೆ ವಾಪಸ್:ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷದ ಹುದ್ದೆಗಳಿಗೆ ಮುಸ್ಲಿಂ ಮುಖಂಡರು ರಾಜೀನಾಮೆ ನೀಡಿದ ಕುರಿತು ಪ್ರತಿಕ್ರಿಯಿಸಿ, ಕಾಂಗ್ರೆಸ್‌ನ ಮುಸ್ಲಿಂ ಮುಖಂಡರ ರಾಜೀನಾಮೆ ವಾಪಸ್‌ಗೆ ಮನವಿ ಮಾಡುತ್ತೇನೆ. ಕೆಲವು ನಡೆಯಬಾರದ ಘಟನೆ ನಡೆದಿದೆ. ನಾವು ಸಂವಿಧಾನ ಮತ್ತು ನ್ಯಾಯದ ಪರ ಇದ್ದೇವೆ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಮನವಿ ಮಾಡಲು ಬಂದಿದ್ದೇನೆ. ಕಾಂಗ್ರೆಸ್ ಪಕ್ಷ ಯಾರನ್ನೂ ಕಳೆದುಕೊಳ್ಳಲು ತಯಾರಿಲ್ಲ. ಯಾವುದೋ ಸಂದರ್ಭದಲ್ಲಿ ಭಾವನಾತ್ಮಕವಾಗಿ ಮನಸ್ಸಿಗೆ ನೋವಾದಾಗ ರಾಜೀನಾಮೆ ಕೊಟ್ಟಿದ್ದಾರೆ. ಎಲ್ಲರಿಗೂ ರಾಜೀನಾಮೆ ವಾಪಸ್ ಪಡೆಯಲು ಮನವಿ ಮಾಡುವುದಾಗಿ ಹೇಳಿದರು.
ಮಂಗಳೂರಿಗೆ ಆಗಮಿಸಿದ ಬಿಕೆ ಹರಿಪ್ರಸಾದ್ ಅವರು ಕಾಂಗ್ರೆಸ್ ಕಾರ್ಯಕರ್ತರನ್ನು, ಧಾರ್ಮಿಕ ಮುಖಂಡರನ್ನು ಭೇಟಿಯಾದರು. ಬಳಿಕ ಇತ್ತೀಚೆಗೆ ಕೊಲೆಗೀಡಾದ ಅಬ್ದುಲ್ ರೆಹಮಾನ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮಳೆಯಿಂದ ಗುಡ್ಡ ಕುಸಿದು ಸಾವಿಗೀಡಾದ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.