ಕನ್ನಡಪ್ರಭ ವಾರ್ತೆ ಮಂಗಳೂರುಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 17- ದಕ್ಷಿಣ ಕನ್ನಡ ಜಿಲ್ಲೆಯೇ ವೆಚ್ಚ ವೀಕ್ಷಕರಾಗಿ ಆಗಮಿಸಿರುವ ಮೆರಗು ಸುರೇಶ್ ಅವರು ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ವಹಿಸಲು ನೇಮಿಸಲಾಗಿರುವ ವಿವಿಧ ತಂಡಗಳ ನೋಡಲ್ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಡಾ. ಆನಂದ್ ಕೆ., ಅಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಖರ್ಚು ವೆಚ್ಚಗಳಿಗೆ ಸಂಬಂಧಿಸಿದಂತೆ ನಿಯೋಜಿಸಲಾಗಿದೆ ನೋಡಲ್ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಇದ್ದರು.
ಇದೇ ಸಂದರ್ಭದಲ್ಲಿ ಚುನಾವಣಾ ವೆಚ್ಚ ವೀಕ್ಷಕರು ಚುನಾವಣಾ ಸಂಬಂಧ ರಚಿಸಲಾಗಿರುವ ವಿವಿಧ ಸಮಿತಿಗಳ ಕಚೇರಿಗಳನ್ನು ಪರಿಶೀಲಿಸಿದರು. ಈ ವೇಳೆ ಎಂ ಸಿ ಎಂ ಸಿ ಸಮಿತಿಯ ಕಚೇರಿಗೂ ಭೇಟಿ ನೀಡಿದ ಅವರು ಸಮಿತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಕೆಲವು ಸೂಚನೆ ನೀಡಿದರು. ಲೋಕಸಭಾ ಚುನಾವಣೆ: ದ.ಕ. ಲೆಕ್ಕ ವೀಕ್ಷಕರಾಗಿ ಮೆರಗು ಸುರೇಶ್ ಆಗಮನಮಂಗಳೂರು: 2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ 17-ದಕ್ಷಿಣ ಕನ್ನಡ ಜಿಲ್ಲೆಗೆ ಅಭ್ಯರ್ಥಿಗಳ, ರಾಜಕೀಯ ಪಕ್ಷಗಳ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಲೆಕ್ಕ ವೀಕ್ಷಕರನ್ನು ನಿಯೋಜಿಸಿದೆ.
ಐಆರ್‌ಎಸ್ ಅಧಿಕಾರಿ ಮೆರಗು ಸುರೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣಾ ಲೆಕ್ಕ ವೀಕ್ಷಕರಾಗಿ ಗುರುವಾರ ಮಂಗಳೂರಿಗೆ ಆಗಮಿಸಿದ್ದಾರೆ.ಚುನಾವಣೆಯಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಚುನಾವಣಾ ಖರ್ಚುಗಳಿಗೆ ಸಂಬಂಧಿಸಿದ ದೂರು, ಅಹವಾಲುಗಳನ್ನು ಸಾರ್ವಜನಿಕರು ಚುನಾವಣಾ ವೀಕ್ಷಕರಿಗೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಅವರು ಕೇಂದ್ರ ಸ್ಥಾನದಲ್ಲಿರುವ ಸಂದರ್ಭದಲ್ಲಿ ಪ್ರತಿದಿನ ಬೆಳಿಗ್ಗೆ 9.30 ರಿಂದ 10.30 ರ ವರೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ (ಫಲ್ಗುಣಿ ಬ್ಲಾಕ್) ನಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ. ಇವರ ಮೊಬೈಲ್ ಸಂಖ್ಯೆ 9482757817 ಹಾಗೂ ದೂರವಾಣಿ ಸಂಖ್ಯೆ 0824-2001596 ಆಗಿದೆ. ಅವರ ಇ-ಮೆಲ್ ಐಡಿ: expenditureobserverdk17@gmail.com
ಆಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.