ಇಂದಿನಿಂದ ಮಾವು, ಹಲಸು ಮೇಳ

KannadaprabhaNewsNetwork |  
Published : May 22, 2026, 02:45 AM IST
ಇಲಾಖೆ  | Kannada Prabha

ಸಾರಾಂಶ

ಕೊಡಗು ಜಿಲ್ಲಾ ಹಾಪ್‌ಕಾಮ್ಸ್ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಪ್ರಸಕ್ತ ಸಾಲಿನ ಮಾವು ಮತ್ತು ಹಲಸು ಮೇಳವು ಮೇ 22ರಿಂದ 24ರವರೆಗೆ ಹಾಪ್‌ಕಾಮ್ಸ್ ಆವರಣದಲ್ಲಿ ನಡೆಯಲಿದೆ.

ಮಡಿಕೇರಿ: ಕೊಡಗು ಜಿಲ್ಲಾ ಹಾಪ್‌ಕಾಮ್ಸ್ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಪ್ರಸಕ್ತ ಸಾಲಿನ ಮಾವು ಮತ್ತು ಹಲಸು ಮೇಳವು ಮೇ 22ರಿಂದ 24ರವರೆಗೆ ಹಾಪ್‌ಕಾಮ್ಸ್ ಆವರಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಹಾಪ್‌ಕಾಮ್ಸ್ ಆವರಣದಲ್ಲಿ ಮೇ 22 ರಂದು ಬೆಳಗ್ಗೆ 10.30 ಗಂಟಗೆ ಮಾವು ಮತ್ತು ಹಲಸು ಮೇಳಕ್ಕೆ ಗಣ್ಯರಿಂದ ಚಾಲನೆ ದೊರೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

----------------------------------

ಇಂದು ನೇರ ಸಂದರ್ಶನಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 22ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ‘ಜೆಕೆ ಟೈರ‍್ಸ್ ಮೈಸೂರು’ ಇವರು ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಸೆಸ್ಸೆಲ್ಸಿಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ. ಮಂಜುನಾಥ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಅವರನ್ನು ಸಂಪರ್ಕಿಸಬಹುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉದ್ಯೋಗ ಆಧರಿತ ಶಿಕ್ಷಣ ಕಾರ್ಯಾಗಾರ
ರಾಜೀವ್‌ ಗಾಂಧಿ ದೂರದೃಷ್ಟಿ ನಾಯಕರು: ಶೇಖರ್‌ ಮಡಿವಾಳ್‌