ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ನಂತರ ಮಾತನಾಡಿದ ಸಚಿವರು, ಜಿಲ್ಲೆಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳನ್ನು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ರೈತರನ್ನು ಪ್ರೋತ್ಸಾಹಿಸಲು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಹಣ್ಣುಗಳು ಸಿಗುವಂತೆ ಮಾಡಲು ಮೇಳ ಆಯೋಜನೆ ಮಾಡಲಾಗಿದೆ. ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಯಲ್ಲಿ ರಿಯಾಯಿತಿ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಖರೀದಿ ಮಾಡಬಹುದಾಗಿದೆ ಎಂದರು.ಮೇಳವು ದೇವನಹಳ್ಳಿ ಬಳಿಯ ನಂದಿ ಉಪಚಾರ ಮುಂಭಾಗ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಆಯೋಜಿಸಲಾಗಿದ್ದು, ಜೂನ್ 13 ರಿಂದ 15 ವರೆಗೆ 2 ದಿನಗಳ ಕಾಲ ಇರಲಿದೆ. ಸಾರ್ವಜನಿಕರು ಕೂಡ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು ಹಾಗೂ ತಾಜಾ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಇದಾಗಿದೆ.
ಸಸ್ಯ ಸಂತೆ ಕಾರ್ಯಕ್ರಮವನ್ನು ಮೇಳದಲ್ಲಿ ಏರ್ಪಡಿಸಲಾಗಿದ್ದು ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ ಗಿಡಗಳನ್ನು ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ ಎಂದರು.ಮೇಳದಲ್ಲಿ ಕಂಡು ಬಂದ ವಿವಿಧ ತಳಿಗಳು:
ಸಚಿವರು ಎಲ್ಲಾ ಮಳಿಗೆಗೆಳಿಗೆ ಭೇಟಿ ನೀಡಿ ರೈತರ ಜತೆ ಸಮಾಲೋಚಿಸಿ ವಿವಿಧ ತಳಿಯ ಮಾವು, ಹಲಸು ಹಾಗೂ ಇತರೆ ಹಣ್ಣುಗಳ ಬಗ್ಗೆ ಮಾಹಿತಿ ಪಡೆದು, ರುಚಿ ಸವಿದು ಹಣ್ಣುಗಳನ್ನು ಖರೀದಿಸಿದರು.
13ಕೆಡಿಬಿಪಿ6- ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಲಸು ಮತ್ತು ಮಾವು ಮೇಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಉದ್ಘಾಟಿಸಿದರು.
13ಕೆಡಿಬಿಪಿ7- ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಲಸು ಮತ್ತು ಮಾವು ಮೇಳದಲ್ಲಿ ವಿವಿಧ ಮಳಿಗೆಗಳಿಗೆ ಭೇಟಿ ನೀಡಿದ ಸಚಿವ ಕೆ.ಎಚ್.ಮುನಿಯಪ್ಪ ತಳಿಗಳ ಬಗ್ಗೆ ಮಾಹಿತಿ ಪಡೆದರು.