ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

KannadaprabhaNewsNetwork |  
Published : Jan 07, 2025, 12:31 AM IST
06ಮಧು | Kannada Prabha

ಸಾರಾಂಶ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (ವೈಡಿಆರ್) ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್ ಸಹಯೋಗದೊಂದಿಗೆ ಯುವ ಮಧುಮೇಹಿಗಳಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಡಾ.ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಮಣಿಪಾಲ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (ವೈಡಿಆರ್) ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್ ಸಹಯೋಗದೊಂದಿಗೆ ಯುವ ಮಧುಮೇಹಿಗಳಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಡಾ.ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ಆಯೋಜಿಸಲಾಯಿತು.ಇದರಲ್ಲಿ 2ರಿಂದ 25 ವರ್ಷದೊಳಗಿನ ಸಾಕಷ್ಟು ಮಧುಮೇಹಿಗಳು ತಮ್ಮ ಆರೈಕೆದಾರರೊಂದಿಗೆ ಭಾಗವಹಿಸಿದ್ದರು. ಅವರಿಗೆ ಅನೇಕ ಮಧುಮೇಹ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.

ಕೆಎಂಸಿಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಮತ್ತು ವೈಡಿಆರ್ ಪ್ರಭಾರಿ ಡಾ.ಶಿವಶಂಕರ ಕೆ.ಎನ್. ಮತ್ತು ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಲೆಸ್ಲಿ ಎಡ್ವರ್ಡ್ ಲೂಯಿಸ್ ಕಾರ್ಯಕ್ರಮ ನಡೆಸಿಕೊಟ್ಟರು. ಅತಿಥಿಯಾಗಿ ಕೆಎಂಸಿ ಸಹಡೀನ್ ಡಾ.ಎಸ್.ಎಸ್. ಪ್ರಸಾದ್ ಪಾಲ್ಗೊಂಡಿದ್ದರು.ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಯುವ ಮಧುಮೇಹಿಗಳಿಗೆ ನಿರಂತರ ಬೆಂಬಲದ ಅಗತ್ಯತೆಯನ್ನು ಒತ್ತಿ ಹೇಳುತ್ತಾ, ದೀರ್ಘಾವಧಿಯ ಆರೋಗ್ಯ ಫಲಿತಾಂಶಗಳನ್ನು ಸುಧಾರಿಸುವಲ್ಲಿ ಜಾಗೃತಿ ಮತ್ತು ಪೂರ್ವಭಾವಿ ನಿರ್ವಹಣೆಯು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು.

ಮಕ್ಕಳ ಎಂಡೋಕ್ರಿನೊಲೊಜಿಸ್ಟ್ ಡಾ.ಕೌಶಿಕ್ ಉರಾಳ ಸಂಯೋಜಿಸಿದ ಕಾರ್ಯಕ್ರಮಕ್ಕೆ ವೈದ್ಯಕೀಯ ವಿಭಾಗದ ಐಸಿಎಂಆರ್ ವೈಡಿಆರ್ ಸಂಶೋಧನಾ ಅಧಿಕಾರಿ ಡಾ. ಅಜಿತ್ ಸಿಂಗ್ ಮತ್ತು ಸಂಶೋಧನಾ ಸಹಾಯಕಿ ಜ್ಯೋತಿ ನಾಯ್ಕ ಸಹಕರಿಸಿದರು.

ಇದೇ ಸಂದರ್ಭದಲ್ಲಿ ಭಾಗವಹಿಸಿದ್ದ ಯುವ ಮಧುಮೇಹಿಗಳಿಗೆ ಮನೋರಂಜನೆಗಾಗಿ ವಿವಿಧ ಆಟಗಳನ್ನು ಆಯೋಜಿಸಲಾಗಿತ್ತು. ಅವರಿಗೆ ಪೌಷ್ಠಿಕಾಂಶವುಳ್ಳ ಆಹಾರವನ್ನು ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು