ಸಾಧನೆಗೆ ತರಬೇತಿ ಸ್ಫೂರ್ತಿ: ಡಾ. ಸುಧಾಕರ ಶೆಟ್ಟಿ

KannadaprabhaNewsNetwork |  
Published : Jul 23, 2026, 02:45 AM IST
ಜ್ಞಾನಸುಧಾ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಕ್ರೀಡಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ವತಿಯಿಂದ ಮಣಿಪಾಲದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ತರಬೇತುದಾರರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಕಳ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ವತಿಯಿಂದ ಮಣಿಪಾಲದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ತರಬೇತುದಾರರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಅಜೆಕಾರು ಪದ್ಮಗೋಪಾಲ ಎಜುಕೇಷನ್ ಟ್ರಸ್ಟ್‌ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಮಾತನಾಡಿ, ಕ್ರೀಡಾ ದಾಖಲೆಗಳ ಮಾಹಿತಿ ಮತ್ತು ವ್ಯವಸ್ಥಿತ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ ಸ್ಫೂರ್ತಿಯಾಗುತ್ತದೆ. ದೈಹಿಕ ಶಿಕ್ಷಣ ಉಪನ್ಯಾಸಕರು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ, ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಮಾಡುವಂತಾಗಬೇಕು ಎಂದು ಕರೆ ನೀಡಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಶುಭ ಹಾರೈಸಿದರು.ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಪನಿರ್ದೇಶಕ ರವೀಂದ್ರ ಉಪಾಧ್ಯ ಮಾತನಾಡಿ, ಮುಂದಿನ ಕ್ರೀಡಾಕೂಟಗಳಿಗೂ ಇಲಾಖೆಯ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಾಧಕರು ಹಾಗೂ ತರಬೇತುದಾರರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ನಿವೃತ್ತ ಉಪನಿರ್ದೇಶಕ ಮಾರುತಿ ಹಾಗೂ ಮಂಗಳೂರು ಉತ್ತರದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಜೀವನ್ ಕುಮಾರ್ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಮಂಜುನಾಥ ಭಟ್, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ದಯಾನಂದ ಪೈ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಒ ದಿನೇಶ್ ಎಂ. ಕೊಡವೂರು, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ್ ಶೆಟ್ಟಿ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ ಶಾನಾಡಿ, ಕ್ರೀಡಾ ಸಂಯೋಜಕ ದಿನೇಶ್ ಕುಮಾರ್ ಎ. ಹಾಗೂ ಕಾರ್ಯದರ್ಶಿ ಸುಕೇಶ್ ಶೆಟ್ಟಿ ಇದ್ದರು.

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶಮಿತಾ ಹಾಗೂ ಅಮೃತ ಭಾರತಿ ಕಾಲೇಜಿನ ವಿಜಯ್ ಶೆಟ್ಟಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಬಿಕಾ ನೀಟ್‌ ಅಕಾಡೆಮಿ: ರಿಪೀಟರ್ಸ್‌ ಬ್ಯಾಚ್ ದಾಖಲಾತಿ ಆರಂಭ
ಕೆಬಿಎಲ್‌ ಹೆಚ್ಚುವರಿ ನಿರ್ದೇಶಕರಾಗಿ ಡಾ.ಎಂ.ಅರುಣ ಶ್ಯಾಮ್‌ ನೇಮಕ