ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕರಿಸಿದ ಡಯಾಲಿಸಿಸ್ ಘಟಕಕ್ಕೆ ಚಾಲನೆ

KannadaprabhaNewsNetwork |  
Published : Apr 10, 2025, 01:17 AM IST
01ಪಿಂಡ | Kannada Prabha

ಸಾರಾಂಶ

ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೂತ್ರಪಿಂಡ ಆರೈಕೆ ಸೇವೆಗಳನ್ನು ಬಲಪಡಿಸುವ ಮಹತ್ವದ ಕ್ರಮದಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ತನ್ನ ಹೊಸದಾಗಿ ನವೀಕರಿಸಿದ ಡಯಾಲಿಸಿಸ್ ಘಟಕವನ್ನು ಅನಾವರಣಗೊಳಿಸಿದೆ.

ಕನ್ನಡಪ್ರಭ ವಾರ್ತೆ ಮಣಿಪಾಲ

ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮೂತ್ರಪಿಂಡ ಆರೈಕೆ ಸೇವೆಗಳನ್ನು ಬಲಪಡಿಸುವ ಮಹತ್ವದ ಕ್ರಮದಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ತನ್ನ ಹೊಸದಾಗಿ ನವೀಕರಿಸಿದ ಡಯಾಲಿಸಿಸ್ ಘಟಕವನ್ನು ಅನಾವರಣಗೊಳಿಸಿದೆ.

ಡಾ. ರಾಮದಾಸ್ ಪೈ ಬ್ಲಾಕ್‌ನಲ್ಲಿರುವ ಈ ಅತ್ಯಾಧುನಿಕ ಡಯಾಲಿಸಿಸ್ ಸೌಲಭ್ಯದ ಜೊತೆಗೆ, ವಿಸ್ತೃತ ಘಟಕವು ಆಸ್ಪತ್ರೆಯ ಸಾಮರ್ಥ್ಯವನ್ನು ಹೆಚ್ಚಿಸಲು ಸಜ್ಜಾಗಿದೆ. ಕರ್ನಾಟಕದ ಜನರಿಗೆ, ವಿಶೇಷವಾಗಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ (ಸಿಕೆಡಿ) ಬಳಲುತ್ತಿರುವವರಿಗೆ ಉನ್ನತ-ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಆಸ್ಪತ್ರೆಯ ನಿರಂತರ ಬದ್ಧತೆಯಲ್ಲಿ ಇದು ಪ್ರಮುಖ ಮೈಲಿಗಲ್ಲು.ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ನವೀಕರಿಸಿದ ಘಟಕವನ್ನು ಉದ್ಘಾಟಿಸಿ, ಈ ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆಯು ಕರಾವಳಿ ಕರ್ನಾಟಕದ ಜನರಿಗೆ ಮೂತ್ರಪಿಂಡ ಕಸಿ ಸೇವೆಗಳ ಜೊತೆಗೆ ಸಮಗ್ರ ಮೂತ್ರಪಿಂಡ ಆರೈಕೆಯನ್ನು ಒದಗಿಸುವ ನಮ್ಮ ಧ್ಯೇಯವನ್ನು ಪೂರೈಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದರು.ಕೆಎಂಸಿ ಮಣಿಪಾಲದ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಮಾಹೆ ಬೋಧನಾ ಆಸ್ಪತ್ರೆಗಳ ಸಿಒಒ ಡಾ. ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಮೂತ್ರಪಿಂಡ ಶಾಸ್ತ್ರ ಮತ್ತು ಮೂತ್ರಪಿಂಡ ಕಸಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ದರ್ಶನ್ ರಂಗಸ್ವಾಮಿ ಸೇರಿದಂತೆ ಹಿರಿಯ ಮೂತ್ರಪಿಂಡ ಶಾಸ್ತ್ರ ತಜ್ಞರು ಉಪಸ್ಥಿತರಿದ್ದರು.ಮೂತ್ರಪಿಂಡ ಶಾಸ್ತ್ರ ಹಾಗೂ ಮೂತ್ರಪಿಂಡ ಕಸಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ದರ್ಶನ್ ರಂಗಸ್ವಾಮಿ ಮಾತನಾಡಿ, ಮೂತ್ರಪಿಂಡ ಆರೈಕೆಗಾಗಿ ಹೆಚ್ಚುತ್ತಿರುವ ಬೇಡಿಕೆಯನ್ನು ಅರ್ಥಮಾಡಿಕೊಂಡ ಕಸ್ತೂರ್ಬಾ ಆಸ್ಪತ್ರೆಯ ಡಯಾಲಿಸಿಸ್ ಸೇವೆಯನ್ನು 1971 ರಲ್ಲಿ ಪ್ರಾರಂಭಿಸಲಾಯಿತು. ಇಂದು ನವೀಕರಿಸಿದ ಘಟಕವು ಪ್ರತಿ ಶಿಫ್ಟ್‌ಗೆ 30 ರೋಗಿಗಳಿಗೆ ಅವಕಾಶ ಕಲ್ಪಿಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು 24*7 ಡಯಾಲಿಸಿಸ್ ಸೇವೆಗಳನ್ನು ಒದಗಿಸುತ್ತದೆ. ಹೊರರೋಗಿ, ಒಳರೋಗಿ ಮತ್ತು ತೀವ್ರ ನಿಗಾ ಘಟಕಗಳಲ್ಲಿ, ವಿಶೇಷ ಚಿಕಿತ್ಸೆಯ ಅಗತ್ಯವಿರುವ ರೋಗಿಗಳಿಗೆ ನಿರ್ಣಾಯಕ ಆರೈಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾತನಾಡಿದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ