ಮಣಿಪಾಲ: ರಸ್ತೆ ಕಾಮಗಾರಿಗೆ ಯಶ್‌ಪಾಲ್ ಸುವರ್ಣ ಗುದ್ದಲಿ ಪೂಜೆ

KannadaprabhaNewsNetwork |  
Published : Mar 15, 2026, 02:45 AM IST
ಮಣಿಪಾಲ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆ ಅಭಿವೃದ್ಧಿಗೆ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು | Kannada Prabha

ಸಾರಾಂಶ

ಮಣಿಪಾಲ: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 3 ಕೋಟಿ ರು. ವೆಚ್ಚದ ಮುಖ್ಯ ರಸ್ತೆ ಅಭಿವೃದ್ಧಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿದರು.

ಮಣಿಪಾಲ: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 3 ಕೋಟಿ ರು. ವೆಚ್ಚದ ಮುಖ್ಯ ರಸ್ತೆ ಅಭಿವೃದ್ಧಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಮಣಿಪಾಲ ಕೈಗಾರಿಕಾ ಪ್ರದೇಶದ ರಸ್ತೆ ಸಂಪೂರ್ಣ ಹದಗೆಟ್ಟು ಈ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕೆಗಳಿಗೆ ಹಾಗೂ ದಿನಂಪ್ರತಿ ಸಂಚರಿಸುವ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗಿತ್ತು. ಈ ನಿಟ್ಟಿನಲ್ಲಿ ಉಡುಪಿ ನಗರಸಭೆ ಮೂಲಕ 40 ಲಕ್ಷ ಅನುದಾನ ಒದಗಿಸಿ, ಸ್ಥಳೀಯ ಕಂಪನಿಗಳ ಸಿಎಸ್ಆರ್ ಅನುದಾನದ ಮೂಲಕ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಪದಾಧಿಕಾರಿಗಳೊಂದಿಗೆ ತಾವು ಶಾಸಕನ ನೆಲೆಯಲ್ಲಿ ಸಮಾಲೋಚನೆ ನಡೆಸಿದಾಗ ಇಲ್ಲಿನ ಖಾಸಗಿ ಕಂಪನಿಗಳು ತಮ್ಮ ಸಿಎಸ್ಆರ್ ನಿಧಿಯಿಂದ ಗರಿಷ್ಠ ಮೊತ್ತವನ್ನು ನೀಡುವ ಮೂಲಕ ಈ ರಸ್ತೆ ಅಭಿವೃದ್ಧಿಗೆ ಕೈಜೋಡಿಸಿ ವಿಶೇಷ ಸಹಕಾರ ನೀಡಿದ್ದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಜಿಲ್ಲಾ ಸಣ್ಣ ಕೈಗಾರಿಕೆ ಸಂಘದ ಅಧ್ಯಕ್ಷ ಮಟ್ಟಾರು ವಸಂತ ಕಿಣಿ ಮಾತನಾಡಿ, ಕೈಗಾರಿಕಾ ಪ್ರದೇಶದ ಬಹು ದಿನದ ಬೇಡಿಕೆಯಾಗಿದ್ದ ರಸ್ತೆ ಕಾಮಗಾರಿ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ ಶಾಸಕ ಯಶ್ ಪಾಲ್ ಸುವರ್ಣ ಅವರಿಗೆ ಅಭಿನಂದನೆ ಸಲ್ಲಿಸಿ, ಕಾಮಗಾರಿ ಶೀಘ್ರ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಸಿಗುವಂತಾಗಲಿ ಎಂದರು.ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಕಲ್ಪನಾ ಸುಧಾಮ, ನರಸಿಂಹ ನಾಯಕ್, ಟಿ. ಜಿ. ಹೆಗ್ಡೆ, ಹರೀಶ್ ಶೆಟ್ಟಿ, ಜಿಲ್ಲಾ ಸಣ್ಣಾ ಕೈಗಾರಿಕೆಗಳ ಸಂಘದ ವಿಶ್ವನಾಥ ಭಟ್, ಚಿತ್ರರಂಜನ್ ಭಟ್, ವಲ್ಲಭ್ ಭಟ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಮುಖರಾದ ಕೃಷ್ಣ ಕುಲಾಲ್, ಸದಾನಂದ ಪ್ರಭು, ನಿತಿನ್ ಪೈ, ಪೃಥ್ವಿರಾಜ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ ಕೃಷ್ಣಮಠಕ್ಕೆ ತಿರುವಂತಪುರ ಉಪ ಮೇಯರ್ ಭೇಟಿ
ಮಹಿಳೆಯಲ್ಲಿರುವ ಪುನಶ್ಚೇತನ ಶಕ್ತಿ ಸಮಾಜಕ್ಕೆ ಸದ್ಬಳಕೆಯಾಗುತ್ತಿಲ್ಲ-ಪಿಎಸ್‌ಐ ಭಾರತಿ