ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಶುಕ್ರವಾರ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಜಿಕೇರೆ ಸಮುದಾಯ ಭವನದಲ್ಲಿ ತಲಾಕಾವೇರಿ ಜ್ಞಾನವಿಕಾಸ ತಂಡದ ವತಿಯಿಂದ ಬೀದಿನಾಟಕದ ಮೂಲಕ ವೈಯಕ್ತಿಕವಾಗಿ ಆರೋಗ್ಯ ಬಗ್ಗೆ ಕಾಳಜಿ ವಹಿಸುವುದು, ಅಪ್ರಾಪ್ತ ವಯಸ್ಕ ಮಕ್ಕಳಿಗೆ ವಿವಾಹ ನಡೆಸುವುದರಿಂದ ಮುಂದಾಗುವ ದುಷ್ಪಾರಿಣಾಮ, ತಮ್ಮ ಸುತ್ತ ಮುತ್ತಲಿನ ಪರಿಸರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುತ್ತಿರುವ ಹಾನಿ ಹಾಗೂ ತಮ್ಮ ಸುತ್ತ ಮುತ್ತಲ್ಲಿನಲ್ಲಿ ಹಸಿರು ಪರಿಸರವನ್ನು ಸಂರಕ್ಷಿಸುವ ವಿಚಾರದ ಕುರಿತು ಈ ಭಾಗದ ಜನತೆಯಲ್ಲಿ ಜಾಗೃತಿ ಮೂಡಿಸಿದರು.
ಈ ಸಮಾರಂಭದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ್ ನೇರವೇರಿಸಿದರು.ಸಮಾರಂಭದ ವೇದಿಕೆಯಲ್ಲಿ ಕಾನ್‌ಬೈಲ್ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಮೂರ್ತಿ, ಗ್ರಾ.ಪಂ.ಸದಸ್ಯೆ ಪ್ರೇಮಾ, ಜ್ಞಾನವಿಕಾಸ ಕೇಂದ್ರ ಸಮನ್ವಯ ಅಧಿಕಾರಿ ಮಾಲಿನಿ, ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಸೇವಾ ಪ್ರತಿನಿಧಿ ಯಶೋಧ ಬಸವರಾಜ್ ಇದ್ದರು.
ಮಡಿಕೇರಿ ಸರ್ಕಾರಿ ಮಾದರಿ ಶಾಲೆ ಪ್ರಾರಂಭೋತ್ಸವ:
ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ಶಾಲಾ ಶಿಕ್ಷಕಿ ಜಯಮ್ಮ ನಿರೂಪಿಸಿದರು. ಶಾಲಾ ಮುಖ್ಯಶಿಕ್ಷಕರು ಸ್ವಾಗತಿಸಿದರು. ಶಿಕ್ಷಣ ಇಲಾಖೆಯ ಡಿ.ವೈ. ಪಿ. ಸಿ ಕೃಷ್ಣಪ್ಪ ಶುಭಾಶಯ ಕೋರಿದರು. ಅತಿಥಿಗಳು ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಿಸಿದರು. ಶಿಕ್ಷಕಿ ಸಿಸ್ಸಿ ಮ್ಯಾಥಿರ್ ವಂದಿಸಿದರು.