ಯುವಜನತೆ ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಮಂಜು ಸಲಹೆ

KannadaprabhaNewsNetwork |  
Published : May 13, 2026, 12:30 AM IST
01 | Kannada Prabha

ಸಾರಾಂಶ

ದೇವನಹಳ್ಳಿ: ಜಿಲ್ಲಾ ಮಟ್ಟದ ಷಟಲ್‌ ಬ್ಯಾಡ್ಮಿಂಟನ್ ಕ್ರೀಡಾಕೂಟಗಲ್ಲಿ ವಿಜೇತರಾದ ತಂಡಗಳು ರಾಷ್ಟ್ರಮಟ್ಟದ ಕ್ರೀಡಾಕೂಟಗಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಿ ವಿಜೇತರಾಗಿ ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ಶ್ರೀ ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣದ ಅಧ್ಯಕ್ಷ ಕೆ.ಮಂಜು ತಿಳಿಸಿದರು

ದೇವನಹಳ್ಳಿ: ಜಿಲ್ಲಾ ಮಟ್ಟದ ಷಟಲ್‌ ಬ್ಯಾಡ್ಮಿಂಟನ್ ಕ್ರೀಡಾಕೂಟಗಲ್ಲಿ ವಿಜೇತರಾದ ತಂಡಗಳು ರಾಷ್ಟ್ರಮಟ್ಟದ ಕ್ರೀಡಾಕೂಟಗಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಿ ವಿಜೇತರಾಗಿ ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ಶ್ರೀ ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣದ ಅಧ್ಯಕ್ಷ ಕೆ.ಮಂಜು ತಿಳಿಸಿದರು.

ಪಟ್ಟಣದ ಶಾಂತಿನಗರದಲ್ಲಿರುವ ಶ್ರೀವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾ ಸಂಘದಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಡಬಲ್ಸ್ ಷಟಲ್ ಬ್ಯಾಡ್ಮಿಂಟನ್ ಚಾಂಪಿಯನ್‌ ಷಿಪ್‌ನಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಯುವಕರಲ್ಲಿ ಕ್ರೀಡಾಸಕ್ತಿ ಹೆಚ್ಚಿಸಲು ಸಂಘದಲ್ಲಿ ನಿತ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತಿದೆ. ಯುವ ಪ್ರತಿಭೆಗಳು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಸೋಲುಗೆಲುವಿನ ಚಿಂತೆ ಮಾಡದೆ ಕೀಡೆಯಲ್ಲಿ ಭಾಗವಹಿಸುವಿಕೆ ರೂಢಿಸಿಕೊಳ್ಳಬೇಕು. ಕ್ರೀಡಾಪಟುಗಳಿಗೆ ಸಂಘದಿಂದ ಎಲ್ಲಾ ಸಹಕಾರ ನೀಡುತ್ತಿದ್ದು ಯುವಕರು ಸದ್ಬಳಸಿಕೊಳ್ಳಬೇಕು ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟು ಡಿ.ಎಂ.ವೇಣುಗೋಪಾಲ್ ಮಾತನಾಡಿ, ಯುವಕರು ದುಶ್ಚಟಗಳಿಗೆ ದಾಸರಾಗದೆ ಏಕಾಗ್ರತೆಯಿಂದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆ ಗುರುತಿಸಿಕೊಳ್ಳಬೇಕು ಎಂದರು.

ದೇವನಹಳ್ಳಿ ಶ್ರೀವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ೧೪ ಮತ್ತು ೧೬ ವಯೋಮಾನದ ಜಿಲ್ಲಾಮಟ್ಟದ ಡಬಲ್ಸ್ ಷಟಲ್ ಬ್ಯಾಡ್ಮಿಂಟನ್‌ನಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳಾಪುರ ಕೋಲಾರ ಜಿಲ್ಲೆಯ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಪ್ರಥಮ ಬಹುಮಾನ ದೇವನಹಳ್ಳಿ ತಂಡ, ದ್ವಿತೀಯ ಸ್ಥಾನ ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ತಂಡ ತೃತೀಯ ಬಹುಮಾನ ಪಡೆದಿದ್ದಾರೆ. ಸೋತವರು ಕುಗ್ಗದೆ ಗೆದ್ದವರು ಹಿಗ್ಗದೆ ಸೋಲುಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದರು.

ಇದೆ ವೇಳೆ ಶ್ರೀವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣದ ಮಾಜಿ ಅಧ್ಯಕ್ಷ ಡಿ.ಎಂ.ವೇಣುಗೋಪಾಲ್, ಅಂತಾರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಕ್ರೀಡಾಪಟುಗಳಾದ ಸದ್ರುಹುಸೇನ್, ಗೋಪಾಲ್, ಶ್ರೀವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣ ಸಂಘದ ಉಪಾಧ್ಯಕ್ಷ ಅಣ್ಣಿ, ಖಜಾಂಚಿ ಧನಂಜಯ್, ಕಾರ್ಯದರ್ಶಿ ಅಂಬರೀಶ್ ಮತ್ತಿತರರು ಉಪಸ್ಥಿತರಿದ್ದರು.

೧೨ ದೇವನಹಳ್ಳಿ ಚಿತ್ರಸುದ್ದಿ: ೦೨

ದೇವನಹಳ್ಳಿಯ ಶ್ರೀ ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾಂಗಣದಲ್ಲಿ ಡಬಲ್ಸ್ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಬಲೀಕರಣ ಹೆಸರಲ್ಲಿ ಕೇಂದ್ರ ಬಿಜೆಪಿ ಮಹಿಳೆಗೆ ಮೋಸ: ಸೈಯ್ಯದ್ ಹನೀಫ್
ಮಕ್ಕಳ ಮಾನಸಿಕ ವಿಕಸನಕ್ಕೆ ಬೇಸಿಗೆ ಶಿಬಿರಗಳು ಅವಶ್ಯ