ಕೊಡವರಿಗಾಗಿ ದುಡಿಯುವವರ ಗೌರವಿಸುವುದು ಕರ್ತವ್ಯ: ಚೇಂದಿರ ಅಪ್ಪಯ್ಯ

KannadaprabhaNewsNetwork |  
Published : Apr 19, 2026, 03:00 AM IST
ಚಿತ್ರ :  17ಎಂಡಿಕೆ4 :  ಮಂಜು ಚಿಣ್ಣಪ್ಪಗೆ ಚಿನ್ನದ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗುವಲ್ಲಿ ಯುಕೊ ಸಂಘಟನೆಯ ಪಾತ್ರವನ್ನು ಪರಿಗಣಿಸಿ ಪೊನ್ನಂಪೇಟೆಯ ವಸಂತನಗರದ ಶ್ರೀ ಇಗ್ಗುತ್ತಪ್ಪ ಕೊಡವ ಕೂಟದ ವತಿಯಿಂದ ಕೂಟದ ಅಧ್ಯಕ್ಷರಾದ ಚೇಂದಿರ ಅಪ್ಪಯ್ಯನವರ ನೇತೃತ್ವದಲ್ಲಿ, ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪನವರನ್ನು ಚಿನ್ನದ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಮಡಿಕೇರಿ: ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗುವಲ್ಲಿ ಯುಕೊ ಸಂಘಟನೆಯ ಪಾತ್ರವನ್ನು ಪರಿಗಣಿಸಿ ಪೊನ್ನಂಪೇಟೆಯ ವಸಂತನಗರದ ಶ್ರೀ ಇಗ್ಗುತ್ತಪ್ಪ ಕೊಡವ ಕೂಟದ ವತಿಯಿಂದ ಕೂಟದ ಅಧ್ಯಕ್ಷರಾದ ಚೇಂದಿರ ಅಪ್ಪಯ್ಯನವರ ನೇತೃತ್ವದಲ್ಲಿ, ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪನವರನ್ನು ಚಿನ್ನದ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಅರುವತೊಕ್ಲುವಿನ ಭರಣಿ ಸಭಾಂಗಣದಲ್ಲಿ ನಡೆದ ಕೂಟದ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಮಂಜು ಚಿಣ್ಣಪ್ಪನವರನ್ನು ವಿಶೇಷವಾಗಿ ಅಹ್ವಾನಿಸಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೂಟದ ಅಧ್ಯಕ್ಷ ಚೇಂದಿರ ಅಪ್ಪಯ್ಯ, ಎಲ್ಲರೂ ಸ್ವಂತಕ್ಕಾಗಿ ದುಡಿಯುವಲ್ಲಿ ನಿರತರಾಗಿರುವಾಗ ಸಮಾಜ ಹಾಗೂ ಜನಾಂಗಕ್ಕಾಗಿ ದುಡಿಯುವವರನ್ನು ಗೌರವದಿಂದ ಕಾಣಬೇಕಿದೆ. ಈ ನಿಟ್ಟಿನಲ್ಲಿ ಕೊಡವ ಜನಾಂಗದ ಏಳಿಗೆಗಾಗಿ ಅವಿರತವಾಗಿ ಶ್ರಮಿಸುತ್ತಿರುವ ಮಂಜು ಚಿಣ್ಣಪ್ಪ ಹಾಗೂ ಅವರ ಬಳಗದ ಕೊಡುಗೆ ಅಪಾರವಾದುದು. ಕೊಡವ ಅಭಿವೃದ್ಧಿ ನಿಗಮದ ಯಶಸ್ಸು ಸಾಮಾನ್ಯ ವಿಷಯವಲ್ಲ, ಈ ನಿಟ್ಟಿನಲ್ಲಿ ಅವರನ್ನು ಗೌರವಿಸುವುದು ನಮಗೆ ಹೆಮ್ಮೆಯೆನಿಸಿದೆ ಎಂದು ಹೇಳಿದರು.

ಮತ್ತೊಬ್ಬ ಹಿರಿಯರಾದ ಕಲ್ಳೇಂಗಡ ಶಂಬು ಮಾತನಾಡಿ, ಕೊಡವ ಅಭಿವೃದ್ದಿ ನಿಗಮ ಘೋಷಣೆಯಾಗಿರುವುದು ನಮಗೆಲ್ಲ ಅತೀವ ಸಂತೋಷ ತಂದಿದೆ. ಈ ವಿಷಯದಲ್ಲಿ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಹಾಗು ಮಂಜು ಚಿಣ್ಣಪ್ಪನವರ ಶ್ರಮಕ್ಕೆ ಬೆಲೆ ಕಟ್ಟಲಾಗದು ಎಂದರು.

ಕೂಟದ ಕಾರ್ಯದರ್ಶಿ ಹಾಗು ಕರ್ನಾಟಕ ಕೊಡವ ಸಾಹಿತ್ಯ ಅಖಾಡೆಮಿಯ ಮಾಜಿ ಅಧ್ಯಕ್ಷ ಚಿರಿಯಪಂಡ ರಾಜಾ ನಂಜಪ್ಪ ಮಾತನಾಡಿ, ನಮ್ಮಲ್ಲಿ ಮಾತನಾಡುವವರ ಸಂಖ್ಯೆ ಬಹಳಷ್ಟಿದೆ, ಆದರೆ ಜನಾಂಗಕ್ಕೆ ಕೆಲಸ ಮಾಡುವವರು ವಿರಳ. ಅಂತದ್ದರಲ್ಲಿ ಯುಕೊ ಸಂಘಟನೆ ಸದ್ದಿಲ್ಲದೆ ಹಿಡಿದ ಕೆಲಸವನ್ನು ಸಾಧಿಸಿ ತೋರಿಸಿರುವುದು ಕೊಡವರಿಗೆ ಹೆಮ್ಮೆಯ ವಿಷಯ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ನೂತನವಾಗಿ ಕೊಡವ ಅಭಿವೃದ್ದಿ ನಿಗಮ ಸ್ಥಾಪಿಸಬೇಕೆಂಬ ನಮ್ಮ ಉದ್ದೇಶದಲ್ಲಿ ಸ್ಪಷ್ಟತೆಯಿತ್ತು, ಕೆಲಸದಲ್ಲಿ ಬದ್ಧತೆಯಿತ್ತು, ಆದರೆ ಶಾಸಕ ಪೊನ್ನಣ್ಣನವರಿಂದಾಗಿ ಇಂದು ಕೊಡವ ಅಭಿವೃದ್ಧಿ ನಿಗಮದ ಕನಸು ನನಸಾಗಿದೆ. ಕೊಡವರು ಎಲ್ಲದರಲ್ಲಿ ರಾಜಕೀಯ ಹುಡುಕುವ ಮನಸ್ಥಿತಿಯಿಂದ ಹೊರಬಂದು ನಿಗಮವನ್ನು ಕೊಡವರ ಸಮಗ್ರ ಅಭಿವೃದ್ದಿಗೆ ಬಳಸಿಕೊಳ್ಳಬೇಕಿದೆ ಎಂದರು.ಚೆಪ್ಪುಡಿರ ಸುಜು ಕರುಂಬಯ್ಯ ಸ್ವಾಗತಿಸಿ ಚಿರಿಯಪಂಡ ರಾಜಾ ನಂಜಪ್ಪ ವಂದಿಸಿದರು. ಶ್ರೀ ಇಗ್ಗುತ್ತಪ್ಪ ಕೊಡವ ಕೂಟದ ಸದಸ್ಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಆತ್ಮಶಕ್ತಿ ಮೂಡುಬಿದಿರೆ ಶಾಖೆಯ ಉದ್ಘಾಟನೆ: ರಾಮಯ್ಯ ಕಾಂಪ್ಲೇಕ್ಸ್ ನಲ್ಲಿ 35ನೇ ಶಾಖೆ
ನಶಿಸುತ್ತಿರುವ ಪರಂಪರೆ ಪುನಃಸ್ಥಾಪಿಸಬೇಕು: ಕಲ್ಕೂರ